ಕೋಟ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ವಲಯ, ಸರಕಾರಿ ಸಂಯುಕ್ತ ಪ್ರೌಢಶಾಲೆ ಮಣೂರು-ಪಡುಕರೆ ಸಂಯುಕ್ತ ಆಶ್ರಯದಲ್ಲಿ ಮಣೂರು ಪ್ರೌಢಶಾಲೆ ಮೈದಾನದಲ್ಲಿ ಬ್ರಹ್ಮಾವರ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪಂದ್ಯಾಟ ನಡೆಯಿತು.
ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಕಾರ್ಯಕ್ರಮ ಉದ್ಘಾಟಿಸಿ, ಕ್ರೀಡೆ ವಿದ್ಯಾರ್ಥಿಗಳ ಜೀವನಕ್ಕೆ ಉತ್ತಮ ಅವಕಾಶಗಳನ್ನು ನೀಡುತ್ತದೆ. ಆದ್ದರಿಂದ ಪಠ್ಯದ ಜತೆಗೆ ಕ್ರೀಡೆ ಮುಂತಾದ ಪಠ್ಯೇತರ ಚಟುವಟಿಕೆಯಲ್ಲೂ ವಿದ್ಯಾರ್ಥಿಗಳು ತೊಡಗಿಕೊಳ್ಳಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ದೈಹಿಕ ಕ್ಷಮತೆ ಹಾಗೂ ಪರಿಪೂರ್ಣವಾದ ಬೆಳವಣಿಗೆಗೆ ಕ್ರೀಡೆ ಸಹಕಾರಿ ಎಂದರು. ಕೋಟ ಗ್ರಾ.ಪಂ.ಅಧ್ಯಕ್ಷೆ ವನಿತಾ ಶ್ರೀಧರ್ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ತಾ.ಪಂ.ಸದಸ್ಯೆ ಲಲಿತಾ ಪೂಜಾರಿ, ಬ್ರಹ್ಮಾವರ ವಲಯ ಪ್ರಭಾರ ಶಿಕ್ಷಣಾಧಿಕಾರಿ ಬಿ.ಟಿ.ನಾಯಕ್, ಪಡುಕರೆ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ನಿತ್ಯಾನಂದ ವಿ.ಗಾಂವ್ಕರ್, ಉಡುಪಿ ಜಿಲ್ಲಾ ಕಬಡ್ಡಿ ಅಸೋಷಿಯೇಶನ್ ಅಧ್ಯಕ್ಷ ರಾಜೇಂದ್ರ ಸುವರ್ಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ್ ತೋಳಾರ್, ಎಸ್.ಡಿ.ಎಂ.ಸಿ. ಅಧ್ಯಕ್ಷ ರವೀಂದರ ಶೆಟ್ಟಿ, ನಿವೃತ್ತ ದೈ.ಶಿ. ಅಧಿಕಾರಿ ಗ್ರೆಗರಿ ಡಿ’ ಸಿಲ್ವಾ ಉಪಸ್ಥಿತರಿದ್ದರು. ತಾಲೂಕು ದೈ.ಶಿಕ್ಷಣ ಪರಿವೀಕ್ಷಣಾಧಿಕಾರಿ ಭುಜಂಗ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ, ಶಿಕ್ಷಕ ಸತೀಶ್ ಐತಾಳ ಸ್ವಾಗತಿಸಿ, ಶ್ರೀಧರ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.