Advertisement
ನಗರದಲ್ಲಿ ಬುಧವಾರ ಶಿಕ್ಷಣ ಇಲಾಖೆಯು ಶಿಕ್ಷಕರ ಸಂಘದ ಪ್ರತಿನಿಧಿಗಳಿಗೆ ಆಯೋಜಿಸಿದ್ದ “ಕಲಿಕಾ ಚೇತರಿಕೆ’ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಈ ಬಗ್ಗೆ ಖಾತರಿಪಡಿಸಿದ್ದಾರೆ.
Related Articles
Advertisement
ಕೆಲವು ಮಕ್ಕಳು ಕಲಿಕೆಯಲ್ಲಿ ಮುಂದಿದ್ದಾರೆ. ಆದರೆ ಕೆಲವು ಮಕ್ಕಳು ತಮ್ಮ ಮನೆಯ ಪರಿಸ್ಥಿತಿ, ಕಲಿಕಾ ವಾತಾವರಣ, ಮಗುವಿಗೆ ಆಸಕ್ತಿ ಇಲ್ಲದಿರುವುದು ಸಹಿತ ವಿವಿಧ ಕಾರಣಗಳಿಗೆ ಕಲಿಕೆಯಿಂದ ಹಿಂದುಳಿದಿದ್ದಾರೆ. ಕೊರೊನಾ ಸಮಯದಲ್ಲಿ ಶಾಲೆಗಳು ನಡೆಯದಿರುವುದರಿಂದ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ತರಬೇತಿ ನೀಡುವ ಉದ್ದೇಶದಿಂದ ಕಲಿಕಾ ಚೇತರಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಲಿಕೆಯಿಂದ ಹಿಂದುಳಿದ ಮಕ್ಕಳಿಗೆ ಶಿಕ್ಷಕರು ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಕನಿಷ್ಠ ಮುಂದಿನ ವರ್ಷವಾದರೂ ಮಕ್ಕಳು ಕಲಿಕಾ ಹಂತಕ್ಕೆ ಬರುವಂತೆ ಮಾಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಅನಿವಾರ್ಯ ಕಾರಣಗಳಿಂದ ಶಿಕ್ಷಕರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದ್ದು, ಪರಿಸ್ಥಿತಿ ಅರ್ಥ ಮಾಡಿಕೊಂಡು ಕಲಿಕಾ ಚೇತರಿಕೆ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ನಿರ್ದೇಶಿಸಿದರು.