Advertisement

ಮಾರ್ಚ್ ತಿಂಗಳಲ್ಲಿ ಬಾಂಗ್ಲಾದೇಶಕ್ಕೆ ಪ್ರಧಾನಿ ಮೋದಿ ಭೇಟಿ

08:55 AM Mar 01, 2020 | Hari Prasad |

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ ತಿಂಗಳಿನಲ್ಲಿ ಬಾಂಗ್ಲಾದೇಶಕ್ಕೆ ಮೂರು ದಿನಗಳ ಭೇಟಿಯನ್ನು ನೀಡಲಿದ್ದಾರೆ. ಪ್ರಧಾನಿ ಅವರು ಮಾರ್ಚ್ 16ರಿಂದ 18ರವರೆಗೆ ಬಾಂಗ್ಲಾದೇಶ ಪ್ರವಾಸವನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

Advertisement

ಈ ತ್ರಿದಿನ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸಿನಾ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಲಿದ್ದಾರೆ. ಎರಡೂ ದೇಶಗಳ ಪ್ರಧಾನಿಗಳ ಭೇಟಿ ಮಾರ್ಚ್ 18ರಂದು ನಡೆಯಲಿದೆ ಎಂದು ತಿಳಿದುಬಂದಿದೆ.

ಕೇಂದ್ರ ಸರಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರ ಬಾಂಗ್ಲಾ ಭೇಟಿಗೆ ಮಹತ್ವ ಬಂದಿದೆ. ಪ್ರಧಾನಿ ಮೋದಿ ಅವರ ಬಾಂಗ್ಲಾ ಭೇಟಿಯ ವಿಚಾರವನ್ನು ವಿವಿಧ ಮೂಲಗಳನ್ನು ಆಧರಿಸಿ ಬಾಂಗ್ಲಾ ಟ್ರಿಬ್ಯುನಲ್ ವರದಿ ಮಾಡಿದೆ.

ಮಾರ್ಚ್ 16ಕ್ಕೆ ಬಾಂಗ್ಲಾದೇಶಕ್ಕೆ ಆಗಮಿಸುವ ಪ್ರಧಾನಿ ಮೋದಿ ಅವರು 17ರಂದು ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮ ಶತಮಾನೋತ್ಸವದ ಸಂಸ್ಮರಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ಪ್ರಧಾನಿ ಭೇಟಿಗೆ ಪೂರ್ವಭಾವಿಯಾಗಿ ವಿದೇಶಾಂಗ ಕಾರ್ಯದರ್ಶಿ ಹರ್ಷ ವರ್ಧನ್ ಅವರು ಮಾರ್ಚ್ ಮೊದಲ ವಾರದಲ್ಲಿ ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next