Advertisement

ವಿಶ್ವ ಆಯುರ್ವೇದ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಪ್ರಧಾನಿ: ಗೋವಾ ಸಿಎಂ

04:41 PM Dec 06, 2022 | Team Udayavani |

ಪಣಜಿ: ಡಿಸೆಂಬರ್ 8 ರಿಂದ 11 ರವರೆಗೆ ಪಣಜಿಯಲ್ಲಿ ನಡೆಯುತ್ತಿರುವ ವಿಶ್ವ ಆಯುರ್ವೇದ ಕಾಂಗ್ರೆಸ್‍ನ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅಖಿಲ ಭಾರತ ಆಯುರ್ವೇದ ಸಂಸ್ಥೆ ಹಾಗೂ ಇನ್ನೆರಡು ಸಂಸ್ಥೆಗಳನ್ನು ಪ್ರಧಾನಮಂತ್ರಿಯವರು ವರ್ಚುವಲ್ ರೀತಿಯಲ್ಲಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾಹಿತಿ ನೀಡಿದ್ದಾರೆ.

Advertisement

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ಉತ್ತರ ಪ್ರದೇಶದಲ್ಲಿ ಘಾಜಿಯಾಬಾದ್‍ನ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ ಮತ್ತು ದೆಹಲಿಯ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಹೋಮಿಯೋಪತಿ ಎಂಬ ಎರಡು ಸಂಸ್ಥೆಗಳನ್ನು ಪ್ರಧಾನಿಯವರು ಒಂದೇ ದಿನ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಅಖಿಲ ಭಾರತ ಆಯುರ್ವೇದ ಸಂಸ್ಥೆಯನ್ನು 50 ಎಕರೆ ಜಾಗದಲ್ಲಿ 302 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. 210 ಸ್ನಾತಕ ಮತ್ತು 56 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಯುರ್ವೇದ ಅಧ್ಯಯನಕ್ಕೆ ಸೌಲಭ್ಯ ಕಲ್ಪಿಸಲಾಗುವುದು. ವಿಶ್ವ ಆಯುರ್ವೇದ ಕಾಂಗ್ರೆಸ್ ಕಲಾ ಅಕಾಡೆಮಿ, ದರ್ಬಾರ್ ಹಾಲ್ ರಾಜಭವನ, ಬಂದೋಡ್ಕರ್ ಸ್ಟೇಡಿಯಂ, ಐನಾಕ್ಸ್ ಕಾಂಪ್ಲೆಕ್ಸ್, ಎನ್‍ಐಒ ಆಡಿಟೋರಿಯಂನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಇಲ್ಲಿಯವರೆಗೆ 5 ಸಾವಿರ ಪ್ರತಿನಿಧಿಗಳು ನೋಂದಾಯಿಸಿಕೊಂಡಿದ್ದಾರೆ ಮತ್ತು 30 ದೇಶಗಳಿಂದ 250 ವಿದೇಶಿ ಪ್ರತಿನಿಧಿಗಳು ಸಹ ಭಾಗವಹಿಸಲಿದ್ದಾರೆ. 150 ಉಪನ್ಯಾಸಕರು ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. ಅಲ್ಲದೆ 450 ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದರು.

ಇದನ್ನೂ ಓದಿ: ಕುರುಗೋಡು: ದೇಶದ ಅಖಂಡತೆಗೆ ಅಂಬೇಡ್ಕರ್ ಸೇವೆ ಅನನ್ಯ: ಟಿ. ಮುದಿಯಪ್ಪ ನಾಯಕ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next