45 ಲಕ್ಷ ರೂ. ಅನುದಾನದಲ್ಲಿ ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಮೂಲ ಸೌಕರ್ಯಕ್ಕೆ ಸಂಬಂಧಿ
ಸಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದು ಎಂದು ತಾಪಂ ನೋಡೆಲ್
ಅಧಿಕಾರಿ ಹನುಮಶೆಟ್ಟಿ ತಿಳಿಸಿದರು.
Advertisement
ಹನೂರು ಸಮೀಪದ ಮಂಗಲ ಗ್ರಾಮ ಪಂಚಾಯ್ತಿ ಆವರಣದಲ್ಲಿ ಶುಕ್ರವಾರ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಆಯ್ಕೆ ಕುರಿತು ಆಯೋಜಿಸಿದ್ಧ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿ, ಶೇ.50ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಅವರಿಗೆ ಭೌತಿಕ ಹಾಗೂ ಸಾಮಾಜಿಕ ಮೂಲ ಸೌಕರ್ಯವನ್ನು ಒದಗಿಸುವುದರ ಮೂಲಕ ಅವರ ಸಾಮಾಜಿಕ,ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹಾಗೂ ಪರಿಶಿಷ್ಟ ಹಾಗೂ ಇತರೆ ವರ್ಗದ ನಡುವೆ ಇರುವ ವ್ಯತ್ಯಾಸವನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ಸರ್ಕಾರದಿಂದ 25 ಲಕ್ಷ ರೂ. ಹಾಗೂ ರಾಜ್ಯ ಸರ್ಕಾರದಿಂದ 20 ಲಕ್ಷ ರೂ. ಅನುದಾನ
ದೊರೆಯಲಿದೆ. ಈಗಾಗಲೇ ಕೇಂದ್ರ ಸರ್ಕಾರ ದಿಂದ 40 ಕೋಟಿ ರೂ. ಹಾಗೂ ರಾಜ್ಯ
ಸರ್ಕಾರದಿಂದ 40 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ವಿವರಿಸಿದರು. ಗ್ರಾಮಸ್ಥರ ಸಹಕಾರ ಪಡೆಯಿರಿ: ಈ ಅನುದಾನದಲ್ಲಿ ಎಸ್ಸಿ, ಎಸ್ಟಿ ವರ್ಗದ ಕಾಲೋನಿಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದು. ಆದ್ದರಿಂದ ಗ್ರಾಪಂ ಜನಪ್ರತಿನಿಧಿಗಳು, ಅಧಿಕಾರಿಗಳು ಗ್ರಾಮಸ್ಥರ ಸಹಕಾರ ಪಡೆದು ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಮೂಲಕ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.
Related Articles
Advertisement
ಕ್ರಿಯಾಯೋಜನೆ ಆಗಬೇಕು: ಈಗಾಗಲೇ ಈ ಯೋಜನೆಯಡಿ ಕೈಗೊಳ್ಳಬದಾದ ಕಾಮಗಾರಿಗಳ ಬಗ್ಗೆ ಅಂದಾಜುಪಟ್ಟಿ ತಯಾರಿಸಲಾಗಿದ್ದು, ಕ್ರಿಯಾಯೋಜನೆ ತಯಾರಿಸಬೇಕಿದೆ ಎಂದು ತಿಳಿಸಿದರು.ಇದೇ ವೇಳೆ ಈ ಯೋಜನೆಯಡಿ ಗ್ರಾಮದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆಯಲಾಯಿತು. ಈ ವೇಳೆ ತಾಪಂ ಸದಸ್ಯೆ ಮಾಣಿಕ್ಯ ಎಚ್.
ಪುಟ್ಟರಾಜು, ಗ್ರಾಪಂ ಅಧ್ಯಕ್ಷೆ ಪುಷ್ಪಾಮೂರ್ತಿ, ಉಪಾಧ್ಯಕ್ಷ ಉಮೇಶ್, ಗ್ರಾಪಂ ಸದಸ್ಯರಾದ
ಕೆ.ಚಿಕ್ಕಸ್ವಾಮಿ, ವಿಶ್ವೇಶ್ವರ್‌ಪ್ರಸಾದ್, ಕನಕರಾಜು, ಡಿ.ವೀರಭದ್ರಯ್ಯ, ಸರೋಜಾ, ಗ್ರಾಮಸ್ಥರು
ಹಾಗೂ ಶಾಲೆಯ ಶಿಕ್ಷಕರು ಇದ್ದರು.