Advertisement

ಪ್ರಧಾನಿ, ಗೃಹ ಸಚಿವರ ಭೇಟಿಯಾದ ಗೌರ್ನರ್‌

11:16 PM Jun 11, 2019 | Lakshmi GovindaRaj |

ನವದೆಹಲಿ: ಕರ್ನಾಟಕದ ರಾಜ್ಯಪಾಲ ವಜುಭಾಯ್‌ ವಾಲಾ ನವದೆಹಲಿಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದರು.

Advertisement

ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಮೈತ್ರಿ ಸರ್ಕಾರ ಬಿಕ್ಕಟ್ಟಿನ ಸ್ಥಿತಿ ಎದುರಿಸುತ್ತಿರುವಾಗಲೇ ರಾಜ್ಯಪಾಲರ ಈ ಭೇಟಿ ಮಹತ್ವ ಪಡೆದಿದೆ. ಪ್ರಧಾನಿ ಮೋದಿಯವರ ಕಾರ್ಯಾಲಯವು ಕರ್ನಾಟಕ ರಾಜ್ಯಪಾಲರು ಭೇಟಿ ಮಾಡಿದ ಫೋಟೋ ಟ್ವೀಟ್‌ ಮಾಡಿದೆ.

ಮತ್ತೂಂದೆಡೆ ರಾಜಸ್ಥಾನ ರಾಜ್ಯಪಾಲ ಕಲ್ಯಾಣ್‌ ಸಿಂಗ್‌, ಗುಜರಾತ್‌ ರಾಜ್ಯಪಾಲ ಓಂ ಪ್ರಕಾಶ್‌ ಕೋಲಿ, ಉತ್ತರಾಖಂಡ ರಾಜ್ಯಪಾಲ ಬೇಬಿರಾಣಿ ಮೌರ್ಯ ಪ್ರಧಾನಿ ಮೋದಿ, ಗೃಹ ಸಚಿವ ಶಾರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಜತೆಗೆ ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳ ಜತೆಗೂ ರಾಜ್ಯಪಾಲರು ಮಾತನಾಡಿದ್ದಾರೆ. ಆಯಾ ರಾಜ್ಯಗಳಲ್ಲಿರುವ ವಿಚಾರಗಳ ಬಗ್ಗೆ ಗೃಹ ಸಚಿವರು ಮಾತುಕತೆ ನಡೆಸಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next