Advertisement

370ನೇ ವಿಧಿ ಯಥಾಸ್ಥಿತಿಗೆ ಪ್ರಧಾನಿ ಭರವಸೆ

06:45 AM Aug 12, 2017 | |

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ 370ನೇ ವಿಧಿಯ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಪ್ರಧಾನಿ ಮೋದಿ ಅವರೊಂದಿಗೆ ಮನವಿ ಮಾಡಿದ್ದು, ಅದಕ್ಕೆ ಅವರು ಶೇ.100ರಷ್ಟು ಭರವಸೆಯ ಮಾತುಗಳನ್ನು ಆಡಿದ್ದಾರೆ ಎಂದು ಸಿಎಂ ಮೆಹಬೂಬಾ ಮುಫ್ತಿ ಹೇಳಿದ್ದಾರೆ. 370ನೇ ವಿಧಿಗೆ ಸಂಬಂಧಿಸಿ ವಿವಾದ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಅವರು ಶುಕ್ರವಾರ ದೆಹಲಿಗೆ ತೆರಳಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದರು. ರಾಜ್ಯಕ್ಕೆ ನೀಡಿರುವ ಸಾಂವಿಧಾನಿಕ ಸ್ಥಾನಮಾನವನ್ನು ಬದಲಿಸದಂತೆ ಅವರು ಕೋರಿಕೊಂಡಿದ್ದಾರೆ.
 

Advertisement
Advertisement

Udayavani is now on Telegram. Click here to join our channel and stay updated with the latest news.

Next