ದೇವನಹಳ್ಳಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರು ವಾರ್ಷಿಕ 6 ಸಾವಿರ ಪಡೆಯಬಹುದಾಗಿದೆ. ಕಂದಾಯ ಇಲಾಖೆ ಸಹಯೋಗದೊಂದಿಗೆ ಸಿದ್ಧಪಡಿಸಿರುವ ಮೊಬೈಲ್ ಆ್ಯಪ್ ಬಿಡುಗಡೆಗೊಂಡಿದೆ. ಇದರಿಂದ ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿ ಕಾರಿ ಸಿ.ಎಸ್.ಕರೀಗೌಡ ಹೇಳಿದರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಆ್ಯಪ್‌ಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮೊಬೈಲ್ನಲ್ಲಿ ಆ್ಯಪ್‌ನ್ನು ಗೂಗಲ್ ಪ್ಲೇಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಸ್ವಯಂ ದೃಢೀಕರಣ ಪತ್ರದಲ್ಲಿ ಅಗತ್ಯ ಮಾಹಿತಿ ಭರ್ತಿ ಮಾಡಿದ ಮೊಬೈಲ್ ಮೂಲಕವೇ ಫೋಟೋ ತೆಗೆದು ರೈತರೇ ಅಪ್‌ಲೋಡ್ ಮಾಡಬಹುದಾದ ತಂತ್ರಾಂಶದಲ್ಲಿ ಮಾಡಲಾಗಿದೆ. ಈ ತಂತ್ರಾಂಶದಲ್ಲಿ ತಮ್ಮ ಜಮೀನು ಇರುವ ಜಿಲ್ಲೆ, ತಾಲೂಕು, ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿ ನಂತರ ತಮ್ಮ ಮೊಬೈಲ್ ನಂಬರ್ ಅನ್ನು ದಾಖಲಿಸಿ ಮುಂದುವರಿಯಬೇಕಾಗುತ್ತದೆ ಎಂದರು.
ನಾಲ್ಕು ಸಂಖ್ಯೆಯ ಪಾಸ್‌ವರ್ಡ್ ದಾಖಲಿಸಿ, ನಂತರ ಗ್ರಾಮವನ್ನು ಆಯ್ಕೆ ಮಾಡಿ ಅಪ್‌ಲೋಡ್ ಎಂಬ ಬಟನ್ ಒತ್ತಬೇ ಕಾಗುತ್ತದೆ. ಈ ಹಂತದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ಭೂ ದಾಖಲೆಗಳ ವಿವರಗಳು ನೇರವಾಗಿ ಭೂಮಿಯ ದತ್ತಾಂಶದಿಂದ ಮೊಬೈಲ್ಗೆ ಡೌನ್‌ಲೋಡ್ ಆಗುತ್ತದೆ. ಸರ್ವೆ ಸಂಖ್ಯೆ ದಾಖಲಿಸಿ ಸ್ವಾಧೀನದಾರರ ಹೆಸರನ್ನು ಆಯ್ಕೆ ಮಾಡಬೇಕು. ವರ್ಗ, ಸಣ್ಣ, ಅತೀ ಸಣ್ಣ, ಹಿಡುವಳಿದಾರರ ಮಾಹಿತಿ ಆಯ್ಕೆ ಮಾಡಿ, ದೃಢೀಕರಿಸದ ನಂತರ ಆಧಾರ್ ಕಾರ್ಡ್ ಮಾಹಿತಿಯನ್ನು ದಾಖಲಿಸಬೇಕು. ಆಧಾರ್ ಕಾರ್ಡ್ ಮಾಹಿತಿ ನೇರವಾಗಿ ಆಧಾರ್‌ಕಾರ್ಡಿನಲ್ಲಿರುವ ಕ್ಯೂಆರ್ ಕೋಡ್‌ಗೆ ಸ್ಕ್ಯಾನ್ ಮಾಡುವ ಮೂಲಕ ಸ್ವಯಂ ಚಾಲಿತವಾಗಿ ಆಧಾರ್ ವಿವರ ದಾಖಲಿಸುವ ಸೌಲಭ್ಯವಿದೆ ಎಂದು ಮಾಹಿತಿ ನೀಡಿದರು.
ಆ್ಯಪ್ ಅನ್ನು ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಮತ್ತು ರೈತರು ಬಳಸಲು ಸಹಕಾರಿಯಾಗುತ್ತದೆ. ಮೊಬೈಲ್ ಸಂಖ್ಯೆ, ಬ್ಯಾಂಕ್ ವಿವರ, ಐಎಫ್‌ಎಸ್‌ಸಿ ಸಂಖ್ಯೆ ನಮೂದಿಸುವ ಮೂಲಕ ಸ್ವಯಂ ಚಾಲಿತವಾಗಿ ಬ್ಯಾಂಕ್ ಮತ್ತು ಬ್ರಾಂಚ್ ಹೆಸರು ಆಯ್ಕೆಯಾಗುವಂತೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಪ್ಲೇಸ್ಟೋರ್ ಲಿಂಕ್ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ. ಈ ಪ್ರಕ್ರಿಯೆಯನ್ನು ಮುಗಿಸಿದ ನಂತರ ದತ್ತಾಂಶವನ್ನು ಉಳಿಸಿ ಸರ್ವೆ ನಂಬರ್ ದಾಖಲಿಸಬಹುದು. ಅಂತಿಮ ಹಂತದಲ್ಲಿ ಎಲ್ಲಾ ದತ್ತಾಂಶವನ್ನು ಅಪ್‌ಲೋಡ್ ಬಟನ್ ಮೂಲಕ ಸಂಗ್ರಹಿಸಿದ ಮಾಹಿತಿ ಮತ್ತು ಛಾಯಾ ಚಿತ್ರಗಳನ್ನು ಕೇಂದ್ರ ಸರ್ವರ್‌ಗೆ ರವಾನೆಯಾಗಲಿದೆ.
ರೈತರು ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಹೊಂದಿ ರುವ ಜಮೀನಿನ ವಿವರಗಳನ್ನು ಸಲ್ಲಿಸಬಹುದಾಗಿದೆ. ಆ್ಯಪ್ ಅಲ್ಲದೆ ಈಗಾಗಲೇ ರೈತರು ರೈತ ಸಂಪರ್ಕ ಕೇಂದ್ರ, ಬಾಪೂಜಿ ಸೇವಾ ಕೇಂದ್ರ, ನಾಡಕಚೇರಿ, ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗೆ ತೆರಳಿ ಅರ್ಜಿ ನಮೂನೆ ಪಡೆದು ವಿವರಗಳನ್ನು ನಮೂದಿಸಿ ಸ್ವಯಂ ಘೋಷಣೆಯೊಂದಿಗೆ ಸಲ್ಲಿಸಲು ಅವಕಾಶವಿದೆ ಎಂದರು.