Advertisement

ನೀವು ಪ್ರೇರಕರು ನಾನು ಸೇವಕ: ಪ್ರಧಾನಿ ಪತ್ರ ಮನೆ ಮನೆಗೆ

10:55 AM Jun 06, 2020 | sudhir |

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೇಶದ ಜನರಿಗೆ ಬರೆದಿರುವ “ನೀವು ಪ್ರೇರಕರು ನಾನು ಸೇವಕ’ ಎಂಬ ಪತ್ರದ ಸಾರಾಂಶ ಹಾಗೂ ಒಂದು ವರ್ಷದ ಸಾಧನೆಯನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ರಮಕ್ಕೆ ಮಂಗಳೂರಿನ ಪಾಂಡೇಶ್ವರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಶುಕ್ರವಾರ ಚಾಲನೆ ನೀಡಿದರು.

Advertisement

ಈ ವೇಳೆ ನಳಿನ್‌ ಮಾತನಾಡಿ, ಕೊರೊನಾದಿಂದಾಗಿ ದೇಶ ಸಂಕಷ್ಟದಲ್ಲಿದ್ದರೂ ಆರ್ಥಿಕವಾಗಿ ಮೇಲೆತ್ತುವಲ್ಲಿ ಸರಕಾರದ ಕಾರ್ಯಯೋಜನೆಗಳು ವಿಶೇಷವಾದದ್ದು. ಲಾಕ್‌ಡೌನ್‌ ಸಂದರ್ಭ ಪ್ರಧಾನಿ ಮೋದಿ ಅವರ ಕರೆಗೆ ಭಾರತೀಯರು ಸ್ಪಂದಿಸಿದ ರೀತಿ ಜನರಿಗೆ ಸರಕಾರದ ಮೇಲಿರುವ ನಂಬಿಕೆಯ ಪ್ರತೀಕವಾಗಿದೆ. ಕಳೆದ ಒಂದು ವರ್ಷದ ಸಾಧನೆ ಕುರಿತು ಹಾಗೂ ದೇಶದ ಜನರಿಗೆ ಪ್ರಧಾನಮಂತ್ರಿಗಳು ಬರೆದಿರುವ ಪತ್ರದ ಸಾರಾಂಶವನ್ನು ಜನತೆಗೆ ತಿಳಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಜನಸ್ನೇಹಿ ಸರಕಾರ
ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಎರಡನೇ ಅವಧಿಗೆ ಪ್ರಥಮ ವರ್ಷ ಪೂರೈಸುತ್ತಿದ್ದು ಈ ಸಂದರ್ಭದಲ್ಲಿ ಸರಕಾರ ಕೈಗೆತ್ತಿಕೊಂಡ ಗಟ್ಟಿ ನಿರ್ಧಾರಗಳ ಕುರಿತು ದೇಶದ ಜನತೆಗೂ ಹೆಮ್ಮೆಯಿದೆ. ಸರಕಾರದ ಎಲ್ಲ ಸಾಧನೆಗಳನ್ನು ಪ್ರತಿ ಮನೆಗೂ ಕಾರ್ಯಕರ್ತರು ತಲುಪಿಸುವ ಕಾರ್ಯವಾಗಲಿದೆ ಎಂದರು.

ಮಹಾನಗರ ಪಾಲಿಕೆಯ ಮೇಯರ್‌ ದಿವಾಕರ್‌ ಪಾಂಡೇಶ್ವರ, ಬಿಜೆಪಿ ಮಂಡಲ ಅಧ್ಯಕ್ಷ ವಿಜಯ್‌ ಕುಮಾರ್‌ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಜೆ. ಸುರೇಂದ್ರ, ರೂಪಾ ಡಿ. ಬಂಗೇರ, ಬಿಜೆಪಿ ಮುಖಂಡರಾದ ಭಾಸ್ಕರಚಂದ್ರ ಶೆಟ್ಟಿ, ರಮೇಶ್‌ ಕಂಡೆಟ್ಟು, ಕಿರಣ್‌ ರೈ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next