Advertisement

ಸಮಾನ ಮನಸ್ಕ ಸ್ವಾಮಿಗಳ ನೇತೃತ್ವದಲ್ಲಿ ಪ್ರಧಾನಿ ಭೇಟಿ

06:45 AM Sep 07, 2018 | Team Udayavani |

ವಿಜಯಪುರ: ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಒತ್ತಡ ಹೇರಲು ಸಮಾನ ಮನಸ್ಕ ಶ್ರೀಗಳ ನೇತೃತ್ವದಲ್ಲಿ ನವದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವುದಾಗಿ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

Advertisement

ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಸ್ಥಗಿತಗೊಂಡಿಲ್ಲ.ಲಿಂಗಾಯತ ಹೋರಾಟದ ಪ್ರಮುಖ ರಾಜಕೀಯ ನಾಯಕರು ಚುನಾವಣೆಯಲ್ಲಿ ಸೋತಿದ್ದರೂ ಅದಕ್ಕೆ ಪ್ರತ್ಯೇಕ ಧರ್ಮ ಹೋರಾಟ ಕಾರಣವಲ್ಲ. ರಾಜಕೀಯಕ್ಕೂ, ಯಾವುದೇ ಪಕ್ಷಕ್ಕೂ, ಪ್ರತ್ಯೇಕ ಧರ್ಮ ಮಾನ್ಯತೆ ಹೋರಾಟಕ್ಕೂ ಸಂಬಂಧವಿಲ್ಲ. ಸಚಿವ ಎಂ.ಬಿ. ಪಾಟೀಲ ಅವರನ್ನು ಸಚಿವರನ್ನಾಗಿ ಮಾಡದಿರಲು ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಕಾರಣವಲ್ಲ ಎಂದರು.

ರಾಜ್ಯಾದ್ಯಂತ ರ್ಯಾಲಿ ಮಾಡಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಅದು ಈಗ ಕೇಂದ್ರದ ಮುಂದಿದೆ. ಬಸವೇಶ್ವರರ ಸಾಮಾಜಿಕ ಕ್ರಾಂತಿ ಕುರಿತು ಸ್ಪಷ್ಟ ಮಾಹಿತಿ ಹೊಂದಿರುವ ಪ್ರಧಾನಿ ಮೋದಿ ಅವರು, ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಸಕಾರಾತ್ಮಕ ಸ್ಪಂದನೆ ನೀಡುವ ವಿಶ್ವಾಸವಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next