Advertisement

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಉಡುಪಿಯಿಂದ 15,000 ಮಂದಿ

02:17 AM Apr 09, 2019 | Team Udayavani |

ಉಡುಪಿ: ಮಂಗಳೂರಿನ ನೆಹರೂ ಮೈದಾನದಲ್ಲಿ ಎ. 13ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ 30ರಿಂದ 35 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ 1.81 ಲಕ್ಷ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಜಯ ಗಳಿಸಿದ್ದರು. ಈ ಬಾರಿ ಮೂರರಿಂದ ಮೂರೂವರೆ ಲಕ್ಷ ಮತಗಳ ಅಂತರದಲ್ಲಿ ಜಯ ಗಳಿಸಲಿದ್ದಾರೆ ಎಂದರು.

ಜಿಲ್ಲೆಯಲ್ಲಿ ಚುನಾವಣೆಗೆ ಪೂರ್ಣ ರೀತಿಯ ತಯಾರಿ ನಡೆಯುತ್ತಿದೆ. ಪಕ್ಷ ಸಂಘಟನೆಯ ಪ್ರಥಮ ಹಂತದ ಅಭಿಯಾನ ಈಗಾಗಲೇ ನಡೆದಿದೆ. ಎ. 10ರಿಂದ 12ರ ವರೆಗೆ ಎರಡನೇ ಹಂತದ ಅಭಿಯಾನ ನಡೆಯಲಿದೆ. ಎ. 14ರಿಂದ 16ರ ವರೆಗೆ ಪೂರ್ಣ ಪ್ರಮಾಣದಲ್ಲಿ ಮತದಾರರನ್ನು ಭೇಟಿ ಮಾಡಿ ಚೀಟಿ ನೀಡುವ ಕೆಲಸವಾಗಲಿದೆ. ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಯವರು ಗ್ರಾ.ಪಂ. ವ್ಯಾಪ್ತಿಯಲ್ಲಿ ಭೇಟಿ ನೀಡಲಿದ್ದಾರೆ ಎಂದರು.

ಸಿಎಂ ವೈಫ‌ಲ್ಯ
ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುವಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಫ‌ಲರಾಗಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಮೀನುಗಾರರಿಗೆ ಪ್ರತ್ಯೇಕ ಖಾತೆ ನೀಡಿದ್ದಾರೆ.ಅವಿಭಜಿತ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.

ಪ್ರವೀಣ್‌ ಕುಮಾರ್‌ ಶೆಟ್ಟಿ ಕಪ್ಪೆಟ್ಟು, ಯಶ್‌ಪಾಲ್‌ ಸುವರ್ಣ, ಕುಯಿಲಾಡಿ ಸುರೇಶ್‌ ನಾಯಕ್‌, ಕೋಶಾಧಿಕಾರಿ ರವಿ ಅಮೀನ್‌, ಪತ್ರಿಕಾಗೋಷ್ಠಿಯಲ್ಲಿದ್ದರು.

Advertisement

ಪ್ರಮೋದರನ್ನೂ ಅಮಾನತು ಮಾಡ ಬೇಡವೆ?
ಪಕ್ಷೇತರ ಅಭ್ಯರ್ಥಿ ಅಮೃತ್‌ ಶೆಣೈ ಅವರನ್ನು ಪಕ್ಷದಿಂದ ಅಮಾನತು ಮಾಡಿದಂತೆ ಪ್ರಮೋದ್‌ ಮಧ್ವರಾಜ್‌ ಅವರನ್ನು ಮಾಡಬೇಕಲ್ಲವೇ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next