ಬೆಂಗಳೂರು: ವಿವಿಧ ಕಾರ್ಯಕ್ರಮಗಳಿಗಾಗಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ವಿಶೇಷ ರೈಲುಗಳಿಗೆ ಚಾಲನೆ ನೀಡಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ (ಮೆಜೆಸ್ಟಿಕ್)ದಲ್ಲಿ ದಕ್ಷಿಣ ಭಾರತದ ಮೊದಲ “ವಂದೇ ಭಾರತ್’ ರೈಲು ಮತ್ತು ಬೆಂಗಳೂರಿನಿಂದ ಕಾಶಿಗೆ ತೆರಳುವ ಭಾರತ್ ಗೌರವ್ “ಕಾಶಿ ದರ್ಶನ್’ ರೈಲಿಗೆ ಹಸಿರು ನಿಶಾನೆ ತೋರಿದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಜೊತೆಗಿದ್ದರು.
ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು ವಿಧಾನಸೌಧ ಆವರಣ- ಶಾಸಕರ ಭವನದ ಬಳಿ ಇರುವ ಕನಕದಾಸ ಪ್ರತಿಮೆ ಮತ್ತು ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಇದನ್ನೂ ನೋಡಿ:ಹೆಬ್ರಿ ಆಶ್ರಮ ಶಾಲೆ ಹಾಸ್ಟೆಲ್ ನಲ್ಲಿ ಅಗ್ನಿ ಅವಘಡ; 4 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
Related Articles
11.50ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಲೋಕಾರ್ಪಣೆ ಮಾಡಲಿದ್ದು, 12.10ಕ್ಕೆ ಸರಿಯಾಗಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ ಹಾಗೂ ಅಮೃತ್ 2.0 ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.