ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ಆದ ನಂತರ ಇ.ಡಿ, ಸಿಬಿಐ ಸೇರಿದಂತೆ ಇಡೀ ಸರ್ಕಾರಿ ತನಿಖಾ ಸಂಸ್ಥೆಗಳನ್ನು ಕೈಗೊಂಬೆ ಮಾಡಿಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಆಡಳಿತದ ವೈಫಲ್ಯವನ್ನು ಮರೆಮಾಚಲು ಇಂತಹ ಕೆಲಸಗಳನ್ನು ಸರ್ಕಾರಿ ಸಂಸ್ಥೆಗಳು ಮೂಲಕ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಬಗ್ಗುವುದಿಲ್ಲ ಎಂದರು.
ರಾಜ್ಯದಲ್ಲಿ 40 ಪರ್ಸೆಂಟೆಜ್ ಕಮಿಷನ್ ಸರ್ಕಾರ ಇದೆ ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ. ಆ ಬಗ್ಗೆ ಪ್ರಧಾನಿ ಕಚೇರಿ ತನಿಖೆ ನಡೆಸಲು ಮುಂದಾಗಲಿಲ್ಲ. ಅದನ್ನು ಕೂಡ ಪ್ರಧಾನಿ ನರೇಂದ್ರ ಮೋದಿ ಮಾಡಬೇಕಾಗಿತ್ತಾಲ್ಲ. ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಮುಗಿಯಿತಾ ಮುನಿಸು? ದೂರ ಉಳಿದಿದ್ದ ಪರಮೇಶ್ವರ್, ಜಮೀರ್ ಪ್ರತ್ಯಕ್ಷ
ಆರ್.ಎಸ್.ಎಸ್, ಹಿಂದೂ ಸಭಾ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿಲ್ಲ. ನಿಮ್ಮ ಹೆಗಡೆವಾರ್ ಕೂಡ ಸ್ವಾತಂತ್ರ್ಯಕ್ಕೆ ಕೊಡುಗೆ ನೀಡಿಲ್ಲ. ಬ್ರಿಟಿಷರಲ್ಲಿ ಹೊಂದಾಣಿಕೆ ಮಾಡಿಕೊಂಡವರು ಆರ್.ಎಸ್.ಎಸ್ ಎಂದು ದೂರಿದರು.