ರುದ್ರಪ್ರಯಾಗ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರಾಖಂಡ ರಾಜ್ಯದ ರುದ್ರಪ್ರಯಾಗ ಜಿಲ್ಲೆಯ ಪ್ರಸಿದ್ಧ ಕೇದಾರನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಬಿಳಿ ಬಣ್ಣದ ಸಾಂಪ್ರದಾಯಿಕ ಉಡುಪನ್ನು ಧರಿಸಿ, ಅದರ ಮೇಲೆ ಸ್ವಸ್ತಿಕ್ ಚಿಹ್ನೆಯನ್ನು ಕಸೂತಿ ಮಾಡಿದ ಧಿರಿಸಿನಲ್ಲಿ ಪ್ರಧಾನ ಮಂತ್ರಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಿದರು. ಪಿಎಂ ಮೋದಿ ಅವರು ಇಂದು ಬದರಿನಾಥ ದೇವಸ್ಥಾನಕ್ಕೂ ಭೇಟಿ ನೀಡಲಿದ್ದಾರೆ.
ಎರಡು ದಿನಗಳ ಉತ್ತರಾಖಂಡ ರಾಜ್ಯ ಪ್ರವಾಸದಲ್ಲಿ ಮೋದಿ ಅವರು ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ ಮತ್ತು ಕೆಲವು ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಡೆಹ್ರಾಡೂನ್ ನ ಜಾಲಿ ಗ್ರಾಂಟ್ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಲೆ.ಜನರಲ್ ಗುರ್ಮಿತ್ ಸಿಂಗ್, ಸಿಎಂ ಪುಷ್ಕರ್ ಸಿಂಗ್ ಧಾಮಿ ಮತ್ತು ಕೇಂದ್ರ ಸಚಿವ ಅಜಯ್ ಭಟ್ ಅವರು ಪಿಎಂ ಮೋದಿ ಅವರನ್ನು ಸ್ವಾಗತಿಸಿದರು.
ಮಧ್ಯಾಹ್ನ ಪಿಎಂ ಮೋದಿ ಅವರು ರಸ್ತೆ ಮತ್ತು ರೋಪ್ ವೇ ಯೋಜನೆಗಳ ಶಂಕುಸ್ಥಾಪನೆ ಮತ್ತು ಮನ ಗ್ರಾಮದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.