Advertisement

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

05:45 PM Apr 28, 2024 | Team Udayavani |

ಬೆಳಗಾವಿ : ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಪ್ರಧಾನಿ ಮೋದಿ ಭಯಾನಕ ಸುಳ್ಳು ಹೇಳಿ ಹೋಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಕಿಡಿ ಕಾರಿದ್ದಾರೆ.

Advertisement

ಉಗಾರಖುರ್ದದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳಿಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರುವುದಿಲ್ಲ’ ಎಂದರು.

ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆಗೆ ಆದೇಶಿಸಿದ್ದು ನಾವು. ಬೊಮ್ಮಾಯಿ ಮಾಡ್ಲಿಲ್ಲ, ಯಡಿಯೂರಪ್ಪ ಮಾಡ್ಲಿಲ್ಲ. ನಾವು ಯಾವತ್ತೂ ಶಿವಾಜಿ ಮಹಾರಾಜರನ್ನು ಅವಮಾನಿಸಿಲ್ಲ ಎಂದು ತಿರುಗೇಟು ನೀಡಿದರು.

ಈಗ ಮೋದಿ ಹಿಂದುಳಿದ ಜಾತಿ ಸಮುದಾಯಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟಲು ಭಯಾನಕ ಸುಳ್ಳು ಸೃಷ್ಟಿಸಿದ್ದಾರೆ. ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಡುತ್ತಾರೆ ಎನ್ನುವ ಭಯಾನಕ ಸುಳ್ಳು ಹೇಳಿದ ಮೋದಿಯವರಿಗೆ ನಾಚಿಕೆ ಇಲ್ಲ. ಕಾಂಗ್ರೆಸ್ಸಿವರು ಜನರ ಬದುಕಿನ‌ ಸಂಕಷ್ಟಗಳನ್ನು ಕಡಿಮೆ ಮಾಡಲು ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಈಡೇರಿಸಿದ ನೈತಿಕತೆಯಿಂದ ನಾವು ನಿಮ್ಮ ಮುಂದೆ ಬಂದು ಮತ ಕೇಳುತ್ತಿದ್ದೇವೆ ಎಂದರು.

ಸ್ವಾಮಿನಾಥನ್ ವರದಿಯಂತೆ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಜಾರಿ ಆಗುತ್ತದೆ. ಇದಕ್ಕಾಗಿ ಕಾಯ್ದೆ ಮಾಡುತ್ತೇವೆ ಎಂದು ಸಿಎಂ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next