Advertisement

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

12:26 PM Nov 11, 2022 | Team Udayavani |

ಬೆಂಗಳೂರು: ‘ಪ್ರಗತಿಯ ಪ್ರತಿಮೆ’ ಎಂದೇ ಕರೆಯಲ್ಪಡುವ ನಾಡಪ್ರಭು ಕೆಂಪೇಗೌಡ ಅವರ 108 ಎತ್ತರದ ಪ್ರತಿಮೆಯನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದರು.

Advertisement

ಅದಕ್ಕೂ ಮೊದಲು ಪ್ರಧಾನಿ ಮೋದಿ ಅವರು ಬೆಂಗಳೂರಿನ ಕಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2ನೇ ಟರ್ಮಿನಲ್ ಉದ್ಘಾಟಿಸಿದರು. ಈ ಸಮಯದಲ್ಲಿ ಸಿಎಂ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸೇರಿ ಹಲವರು ಉಪಸ್ಥಿತಿರಿದ್ದರು.


108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು 84 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. 98 ಟನ್‌ ಕಂಚು, 120 ಟನ್‌ ಉಕ್ಕು ಬಳಸಿ ಪ್ರತಿಮೆ ನಿರ್ಮಿಸಲಾಗಿದೆ. ಕೆಂಪೇಗೌಡ ಆವರ ಕೈಯಲ್ಲಿರುವ ಖಡ್ಗದ ತೂಕ ಬರೋಬ್ಬರಿ ನಾಲ್ಕು ಸಾವಿರ ಕೆ.ಜಿ. ಇದೆ.

24 ಅಡಿ ಎತ್ತರ, 7 ಅಡಿ ಸುತ್ತಳತೆಯ ನಾಲ್ಕು ಗೋಪುರಗಳಿವೆ. ಪ್ರತಿಮೆ ಸುತ್ತ ಆಕರ್ಷಕವಾದ ಥೀಮ್‌ ಪಾರ್ಕ್ ನಿರ್ಮಿಸಲಾಗಿದೆ. ಗುಜರಾತಿನ ‘ಏಕತಾ ಪ್ರತಿಮೆ’ ಸಾಲಿಗೆ ‘ಪ್ರಗತಿ ಪ್ರತಿಮೆ’ ಕೂಡ ಸೇರಲಿದೆ.  ಇದನ್ನು ಖ್ಯಾತ ಶಿಲ್ಪಿ ನೋಯ್ಡಾದ ರಾಮ್‌ ಸುತರ್‌ ನಿರ್ಮಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next