ಆಲಮೇಲ: ರೈತರ ಮತ್ತು ದೇಶದ ಸಾಮಾನ್ಯ ಜನರ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಉತ್ತಮ ಕೆಲಸ ಮಾಡುತ್ತಿದ್ದು ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಸಿಂದಗಿ ಉಪ ಚುನಾವಣೆ ನಿಮಿತ್ತ ಶನಿವಾರ ತಾರಾಪುರ, ತಾವರಖೇಡ, ಕುರುಬತಹಳ್ಳಿ, ಮದನಹಳ್ಳಿ, ಬ್ಯಾಡಗಿಹಾಳ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಪ್ರಚಾರ ಕೈಗೊಂಡು ಅವರು ಮಾತನಾಡಿದರು.
ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಎರಡು ಬಾರಿ ಶಾಸಕರಾಗಿ ಉತ್ತಮ ಕೆಲಸ ಮಾಡಿರುವ ಅನುಭವ ಹೊಂದಿದವರು. ಉಪ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿದರೆ ಕ್ಷೇತ್ರದ ಅಭಿವೃದ್ಧಿ ಕೆಲಸ ಆಗಲಿದೆ. ಅದಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ವಿನಂತಿಸಿದರು.
ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಮಾತನಾಡಿ, ಹಿಂದಿನ ಅವಧಿಯಲ್ಲಿ ಪ್ರಾಮಾಣಿಕ ಕೆಲಸ ಮಾಡಿದ ಬಗ್ಗೆ ಕ್ಷೇತ್ರದ ಜನರಿಗೆ ಗೊತ್ತಿದ್ದು ಕಳೆದ ಬಾರಿ ಅನುಕಂದಿಂದ ಸೋಲು ಅನುಭವಿಸಿದೆ. ಈ ಉಪಚುನಾವಣೆಯಲ್ಲಿ ಕ್ಷೇತ್ರದ ಜನ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ವ್ಯಕ್ತಪಡಿಸುತ್ತಿದ್ದು ಗೆಲುವು ಖಚಿತ ಎಂದರು.
ಇದನ್ನೂ ಓದಿ: ರೈತರ ಬಿಪಿಎಲ್ ಕಾರ್ಡ್ ರದ್ದತಿಗೆ ಆಕ್ಷೇಪ
ಈ ವೇಳೆ ಕಾಂಗ್ರೆಸ್ ಜೆಡಿಎಸ್ ಪಕ್ಷದ 40ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ಮಾಜಿ ಸಂಸದೆ ತೇಜಶ್ವಿನಿ ರಮೇಶ, ಮುಖಂಡರಾದ ಶ್ರೀಮಂತ ನಾಗೂರ, ವಿರಭದ್ರ ಕತ್ತಿ, ಶರಣು ಕತ್ತಿ, ಚಿದಾನಂದ ಹಿರೇಮಠ, ರೇವಣಸಿದ್ದಯ್ಯ ಹಿರೇಮಠ ಮತ್ತಿತರರು ಇದ್ದರು.