Advertisement

ಕೋವಿಡ್ ನಿಯಂತ್ರಣಕ್ಕೆ ಸರ್ಕಾರಗಳು ತಂಡದಂತೆ ಕೆಲಸ ಮಾಡಬೇಕಾಗಿದೆ : ಪ್ರಧಾನಿ ಪ್ರತಿಪಾದನೆ

11:23 PM Jul 20, 2021 | Team Udayavani |

ನವದೆಹಲಿ: ಕೊರೊನಾ ನಿಯಂತ್ರಣ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜತೆಗೂಡಿ ಕೆಲಸ ಮಾಡಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ನವದೆಹಲಿಯಲ್ಲಿ ಮಂಗಳವಾರ ಸೋಂಕಿನ ಪರಿಸ್ಥಿತಿ ಪರಾಮರ್ಶೆ ನಡೆಸಲು ಆಯೋಜಿಸಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ಅವರು ಮಾತನಾಡಿದ್ದಾರೆ. ಈ ಸಭೆಯಿಂದ ಕಾಂಗ್ರೆಸ್‌ ದೂರ ಉಳಿದಿತ್ತು.

Advertisement

ಇತರ ದೇಶಗಳಿಗೆ ಹೋಲಿಕೆ ಮಾಡಿದರೆ, ದೇಶದಲ್ಲಿ ಸೋಂಕು ತಗಲಿರುವವ ಸಂಖ್ಯೆ ಕಡಿಮೆಯಾಗಿಯೇ ಇದೆ ಎಂದು ಪ್ರಧಾನಿ ಪ್ರತಿಪಾದಿಸಿದ್ದಾರೆ. ಇದರ ಹೊರತಾಗಿಯೂ ಜನರು ಎಚ್ಚರಿಕೆಯಿಂದ ಇರಬೇಕು ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಮನವಿ ಮಾಡಿದ್ದಾರೆ. ಯು.ಕೆ. ಮತ್ತು ಇತರ ರಾಷ್ಟ್ರಗಳಲ್ಲಿ ಸೋಂಕು ಹೆಚ್ಚುತ್ತಿರುವುದನ್ನೂ ಪ್ರಧಾನಿ ಪ್ರಸ್ತಾಪಿಸಿದ್ದಾರೆ.

ಹೆಚ್ಚುವರಿ ಲಸಿಕೆ ಶೀಘ್ರದಲ್ಲಿಯೇ ದೇಶದ ಜನರಿಗೆ ಲಭ್ಯವಾಗಲಿದೆ ಎಂದೂ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ. 100 ವರ್ಷಗಳಲ್ಲಿಯೇ ಜನರಿಗೆ ಇಂಥ ಸಮಸ್ಯೆ ಕಂಡುಬಂದಿದೆ ಎಂದಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಹೆಚ್ಚಿನ ನಾಯಕರು ಸೋಂಕು ನಿಯಂತ್ರಣದಲ್ಲಿ ಪ್ರಧಾನಿಯವರು ಕೈಗೊಂಡ ಕ್ರಮಗಳ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ :ಆ.5ಕ್ಕೆ ದೆಹಲಿಯಲ್ಲಿ ಪಾಕ್‌ ಉಗ್ರರಿಂದ ವಿಧ್ವಂಸಕ ಕೃತ್ಯ?: ಕಟ್ಟೆಚ್ಚರ

ಪ್ರಧಾನಿಗೆ ಗೌಡರ ಮೆಚ್ಚುಗೆ
ದೇಶದಲ್ಲಿನ ಕೊರೊನಾ ಪರಿಸ್ಥಿತಿ ನಿರ್ವಹಣೆಯನ್ನು ಪ್ರಧಾನಿ ಮೋದಿ ಸಮರ್ಥವಾಗಿಯೇ ನಿಭಾಯಿಸಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸತತವಾಗಿ ಪ್ರಧಾನಿ ಮೋದಿ ಸೋಂಕು ಪರಿಸ್ಥಿತಿ ನಿಯಂತ್ರಣಕ್ಕೆ ಶ್ರಮಿಸಿದ್ದಾರೆ ಎಂದು ಕೊಂಡಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next