ಹೊಸದಿಲ್ಲಿ: ಅಮೆರಿಕ ಅಧ್ಯಕ್ಷರಾದ ಜೋ ಬೈಡೆನ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕಕ್ಕೆ ಭೇಟಿ ನೀಡಲು ಆಹ್ವಾನ ನೀಡಿದ್ದು, ಜೂನ್ ಅಥವಾ ಜುಲೈನಲ್ಲಿ ಮೋದಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯ ಹೆಚ್ಚಿಸುವ ನಿಟ್ಟಿನಲ್ಲಿ ಬೈಡೆನ್ ಈ ಆಹ್ವಾನ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಇತರೆ ಕಾರ್ಯಕ್ರಮಗಳನ್ನು ಗಮನದಲ್ಲಿಟ್ಟುಕೊಂಡು, ಜೂನ್ ಅಥವಾ ಜುಲೈ ವೇಳೆ ಪ್ರವಾಸ ನಿಗದಿಪಡಿಸಲು ಚಿಂತನೆ ನಡೆಸಿದ್ದಾರೆ ಎಂದು ಪ್ರಧಾನಿ ಕಚೇರಿಯ ಮೂಲಗಳು ತಿಳಿಸಿವೆ.