ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಮುಂಬೈ ಪೊಲೀಸರು ಪ್ರಧಾನಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಮಾಡಿದ್ದ ಅಷ್ಟು ಮಾತ್ರವಲ್ಲದೆ ತನಗೆ ವೈದ್ಯಕೀಯ ನೆರವು ನೀಡದಿದ್ದರೆ ಜೆಜೆ ಆಸ್ಪತ್ರೆಯ ಮೇಲೂ ಬಾಂಬ್ ಹಾಕುವುದಾಗಿ ಕರೆ ಮಾಡಿದ್ದನಂತೆ.
ಇದರಿಂದ ಎಚ್ಚೆತ್ತ ಮುಂಬೈ ಪೊಲೀಸರು ಕರೆ ಮಾಡಿದ ವ್ಯಕ್ತಿಯ ಜಾಡನ್ನು ಹಿಡಿದು ಮುಂಬೈನ ಚುನ್‌ಭಟ್ಟಿ ಪ್ರದೇಶದಿಂದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಅಲ್ಲದೆ ಆತನ ವಿರುದ್ಧ ಐಪಿಸಿ ಸೆಕ್ಷನ್ 505(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಈತ ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡುವ ವೇಳೆ ತನಗೆ ದಾವೂದ್ ಇಬ್ರಾಹಿಂ ಗ್ಯಾಂಗ್ ನ ಸಂಪರ್ಕವಿದೆ ಎಂದು ಹೇಳಿದ್ದ ಎನ್ನಲಾಗಿದ್ದು ಪೊಲೀಸರು ಇದರ ಹಿಂದಿರುವ ವಿಚಾರಗಳ ಬಗ್ಗೆಯೂ ತನಿಖೆ ನಡೆಸಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Politics: ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯ ದತ್ತಪೀಠಕ್ಕೆ ಬರಲಿ ಎಂದು ಸಿ.ಟಿ.ರವಿ ಮನವಿ