Advertisement

ತೀರ್ಪು ಸೋಲು ಅಥವಾ ಗೆಲುವಿನ ವಿಷಯವಲ್ಲ: ಶಾಂತಿ ಸ್ಥಾಪನೆಗೆ ಪ್ರಧಾನಿ ಮೋದಿ ಮನವಿ

09:49 AM Nov 10, 2019 | Hari Prasad |

ಹೊಸದಿಲ್ಲಿ: ಸುಪ್ರೀಂಕೋರ್ಟ್‌ ಶನಿವಾರ ಅಯೋಧ್ಯೆ ಜಮೀನು ಮಾಲಕತ್ವ ವಿವಾದದ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿದೆ. ಸೂಕ್ಷ್ಮಸ್ಥಳಗಳಲ್ಲಿ ಗರಿಷ್ಠ ಪ್ರಮಾಣ ಎಚ್ಚರಿಕೆ ವಹಿಸಲಾಗಿದೆ. ತೀರ್ಪಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸರಣಿ ಟ್ವೀಟ್‌ ಮಾಡಿ ಅಯೋಧ್ಯೆ ತೀರ್ಪು ಯಾವ ಪರವಾದ ಗೆಲುವು ಅಥವಾ ಸೋಲು ಅಲ್ಲ ಎಂದಿದ್ದಾರೆ. ಎಲ್ಲರೂ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಆದ್ಯತೆ ನೀಡಬೇಕು.

Advertisement

ಅಯೋಧ್ಯೆ ಕುರಿತಾಗಿನ ತೀರ್ಪು ಏಕತೆ, ಶಾಂತಿ ಮತ್ತು ಐಕ್ಯತೆ ಬಲಪಡಿಸುವಂತೆ ಆಗಬೇಕು ಎಂದು ಮನವಿ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ಸಮಾಜ ವಿವಿಧ ವರ್ಗಗಳು ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸಿವೆ. ನ್ಯಾಯಾಂಗದ ಮೇಲೆ ಗೌರವ ಇರಿಸಿಕೊಂಡು ವಿವಿಧ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆಗಳು ಈ ಕೆಲಸ ಮಾಡುತ್ತಿವೆ ಎಂದು ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಶಾಂತಿ-ಕಾನೂನು ಸುವ್ಯವಸ್ಥೆ ಕಾಪಿಡಲು ನೆರವಾಗುವಂತೆ ಮನವಿ ಮಾಡಿದ್ದಾರೆ.

ಬಿಗಿ ಭದ್ರತೆ: ತೀರ್ಪಿನ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಸೇರಿದಂತೆ ಸಾಂವಿಧಾನಿಕ ಪೀಠದಲ್ಲಿರುವ ಎಲ್ಲಾ ನ್ಯಾಯಮೂರ್ತಿಗಳಿಗೆ ಝೆಡ್‌ ಪ್ಲಸ್‌ ಭದ್ರತೆ ನೀಡಲಾಗಿದೆ. ಅಯೋಧ್ಯೆಯಲ್ಲಿ ಬಹುಸ್ತರದ ಭದ್ರತೆ ಕೈಗೊಳ್ಳಲಾಗಿದೆ. ಜತೆಗೆ ಎರಡು ಹೆಲಿಕಾಪ್ಟರ್‌ಗಳನ್ನು ನಿಯೋಜಿಸ ಲಾಗಿದೆ. ಹೆಚ್ಚುವರಿಯಾಗಿ 4 ಸಾವಿರ ಕೇಂದ್ರೀಯ ಪಡೆಗಳನ್ನು ಉತ್ತರಪ್ರದೇಶಕ್ಕೆ ಕೇಂದ್ರ ಸರಕಾರ ಈಗಾಗಲೇ ರವಾನಿಸಿದೆ.

ರಜೆ: ದೇಶದ ರಾಜಧಾನಿ ಹೊಸದಿಲ್ಲಿ ಸೇರಿದಂತೆ ದೇಶಾದ್ಯಂತ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ. ಹಲವು ವಿವಿಗಳು ಪರೀಕ್ಷೆಗಳನ್ನು ಮುಂದೂಡಿವೆ. ಉತ್ತರ ಪ್ರದೇಶದಲ್ಲಿ ವಿಶೇಷವಾಗಿ ಸೋಮವಾರ (ನ.11)ದ ವರೆಗೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next