ಬೆಂಗಳೂರು: ಚಂದ್ರನ ಅಂಗಳದಲ್ಲಿ ಇಸ್ರೋ ಉಡಾವಣೆ ಮಾಡಿರುವ ವಿಕ್ರಂ ಲ್ಯಾಂಡರ್ ಇಳಿಯುವ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿದರು. ಯಲಹಂಕದ ವಾಯನೆಲೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯಪಾಲ ವಜೂಭಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವರು ಸ್ವಾಗತಿಸಿದರು.
ಚಂದ್ರನ ಮೇಲೆ ಲ್ಯಾಂಡರ್ ಇಳಿಯುವುದನ್ನು ಪ್ರಧಾನಿ ನರೇಂದ್ರ ಮೋದಿ ಇಸ್ರೋದ
ಕಚೇರಿಯಲ್ಲಿ ಕಣ್ತುಂಬಿಕೊಳ್ಳಲಿದ್ದಾರೆ.
ಬೆಂಗಳೂರಿನ ಪೀಣ್ಯ ಬಳಿಯಿರುವ ಇಸ್ರೋದ ಟೆಲಿಮೆಟ್ರಿ, ಟ್ರಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ (ಐಎಸ್‌ಟಿಆರ್‌ಎಸಿ) ಕೇಂದ್ರದಲ್ಲಿ ಖುದ್ದು ಹಾಜರಾಗಿ ಲ್ಯಾಂಡಿಂಗ್
ವೀಕ್ಷಿಸಲಿದ್ದಾರೆ. ಅವರೊಂದಿಗೆ, ದೇಶದ ನಾನಾ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ 60ರಿಂದ 70 ವಿದ್ಯಾರ್ಥಿಗಳು ಇರಲಿದ್ದಾರೆ.
ಚಂದ್ರಯಾನ ನೌಕೆ ಚಂದಿರನ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್ ಇಳಿಯಲಿರುವ ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ…