Advertisement
ಪ್ರಧಾನಿ ನರೇಂದ್ರ ಮೋದಿ ಈ ಸುಳಿವನ್ನು ನೀಡಿದ್ದಾರೆ. ಬೆಂಗಳೂರಿನ ಮಾದರಿಯಲ್ಲಿ ಇತರ ನಗರಗಳಲ್ಲೂ ಮೆಟ್ರೋ ಸೇವೆಗಳನ್ನು ವಿಸ್ತರಿಸುವ ಯೋಚನೆ ಇದೆ ಎಂದಿದ್ದಾರೆ.
“ನಮ್ಮ ಮೆಟ್ರೋ”ದ 3ನೇ ಹಂತದ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಶುಕ್ರವಾರ ಮೆಟ್ರೋ ಮಾರ್ಗ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬೆಂಗಳೂರು ಮೆಟ್ರೋ ರೈಲು ಯೋಜನೆಯ 3ನೇ ಹಂತದಲ್ಲಿ 45 ಕಿ.ಮೀ.ಗಳ ಉದ್ದದ ಮಾರ್ಗವನ್ನು ಅಂದಾಜು ರೂ. 15,611 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಸಂಬಂಧದ ಸಮಗ್ರ ಯೋಜನಾ ವರದಿ (ಡಿಪಿಆರ್)ಯನ್ನು ಈಗಾಗಲೇ ಅನುಮೋದನೆಗಾಗಿ ಕಳುಹಿಸಿದೆ. ಇದಕ್ಕೆ ಶೀಘ್ರ ಅನುಮೋದನೆ ನೀಡಬೇಕು ಎಂದರು. ಇದಲ್ಲದೆ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ “3ಎ’ಗೆ ಕೂಡ ಡಿಪಿಆರ್ ತಯಾರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.