Advertisement
ಈ ಕುರಿತು ಟ್ವೀಟ್ ಮಾಡಿರುವ ಅವರು, “ಬೆಂಗಳೂರಿನಲ್ಲಿ ಗುರುವಾರ ರಾಷ್ಟ್ರೀಯ ಮತ್ತು ಪ್ರಾದೇಶಿಕ ಮಾಧ್ಯಮಗಳಿಂದ ತುಂಬಿದ ಸಭೆಯನ್ನು ನಾನು ಆನಂದಿಸಿದೆ. ಸಮಯದ ಅಭಾವದಿಂದಾಗಿ ಪ್ರತಿಯೊಬ್ಬರ ಪ್ರಶ್ನೆಗಳನ್ನು ಆಲಿಸಲು ಆಗಲಿಲ್ಲ. ಇದಕ್ಕಾಗಿ ಕ್ಷಮೆ ಯಾಚಿಸುತ್ತೇನೆ. ಆದರೆ, ನಮ್ಮ ಪ್ರಧಾನಿ ನಾಲ್ಕು ವರ್ಷಗಳಿಂದ ಯಾವುದೇ ಸುದ್ದಿಗೋಷ್ಠಿಯನ್ನೂ ನಡೆಸಿಲ್ಲ. ಈ ಅವಧಿಯಲ್ಲಿ ನಾನು ಸಾಕಷ್ಟು ಪತ್ರಿಕಾಗೋಷ್ಠಿ ಮಾಡಿದ್ದೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಹಲವು ಸುದ್ದಿಗೋಷ್ಠಿಗಳ ಸಾಕಷ್ಟು ಫೋಟೋಗಳನ್ನೂ ಪೋಸ್ಟ್ ಮಾಡಿದ್ದಾರೆ.