Advertisement

ಸಮಾನ ರೂಪದ ಯೋಜನೆ ಇರಲಿ ; ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸಲಹೆ

09:05 AM Apr 04, 2020 | Team Udayavani |

ಕೋವಿಡ್ 19 ವೈರಸ್ ಸೋಂಕು ನಿಯಂತ್ರಣಕ್ಕೆ 14 ದಿನಗಳ ಲಾಕ್‌ಡೌನ್‌ ಬಳಿಕ ಜನ ರಸ್ತೆಗಿಳಿಯದಂತೆ ನಿಯಂತ್ರಿಸುವುದೇ ದೊಡ್ಡ ಸವಾಲು. ಈ ಸವಾಲಿಗೆ ಪರಿಹಾರವಾಗಿ ಕೇಂದ್ರ ಹಾಗೂ ಎಲ್ಲ ರಾಜ್ಯ ಸರಕಾರಗಳು ಏಕರೂಪದ ಯೋಜನೆ ಹೊಂದಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.

Advertisement

ಭಾರತ ಲಾಕ್‌ಡೌನ್‌ ಆದ ಬಳಿಕ ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಗುರುವಾರ ನಡೆದ ಮೊದಲ ಬಾರಿಗೆ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಪ್ರಧಾನಿ ಈ ಸಲಹೆ ನೀಡಿದ್ದಾರೆ. ಜನ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿರುವ ಜತೆಗೆ ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿರುವ ಕೋವಿಡ್ 19 ವೈರಸ್ ಸೋಂಕು ಹರಡುವಿಕೆ ತಡೆಗೆ ವಿವಿಧ ರಾಜ್ಯಗಳು ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸಲು ವೀಡಿಯೋ ಕಾನ್ಫರೆನ್ಸ್‌ ಆಯೋಜಿಸಲಾಗಿತ್ತು.

ದೇಶದ ಬಹುತೇಕ ರಾಜ್ಯಗಳಲ್ಲಿ ಸೋಂಕು ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಲಾಕ್‌ಡೌನ್‌ ಮುಗಿಯುವವರೆಗೂ ಇದೇ ಬದ್ಧತೆ, ಶಿಸ್ತನ್ನು ಮುಂದುವರಿಸಿಕೊಂಡು ಹೋಗುವಂತೆ ಮುಖ್ಯ ಮಂತ್ರಿಗಳನ್ನು ಕೋರಿದರು. ಅಲ್ಲದೆ, ಲಾಕ್‌ ಡೌನ್‌ ಅನಂತರ ಸಾರ್ವಜನಿಕರು ಮನೆಯಿಂದ ಹೊರಬಾರದಂತೆ ತಡೆಯುವ ಅಗತ್ಯದ ಕುರಿತೂ ಚರ್ಚಿಸಿದರು.

ಗಂಭೀರವಾಗಿ ಪರಿಗಣಿಸಿ: ಈ ನಿಟ್ಟಿನಲ್ಲಿ ಎಲ್ಲ ರಾಜ್ಯಗಳು ಹಾಗೂ ಕೇಂದ್ರ ಸರಕಾರ ಸಾಮಾನ್ಯ ಯೋಜನೆಯನ್ನು ಅಳವಡಿಸಿಕೊಳ್ಳುವುದ ಅತ್ಯಗತ್ಯ ಎಂದು ಪ್ರತಿಪಾದಿಸಿ ಪ್ರಧಾನಿ, ದೇಶದಲ್ಲಿ ಏ.14ರ ಅನಂತರದ ವಾತಾವರಣ ಎಂದಿನಂತೆ ಸಹಜ ಸ್ಥಿತಿಯಲ್ಲಿ ಇರಬಾರದು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಬೇಕು. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಕ್ರಮಗಳನ್ನೂ ರಾಜ್ಯಗಳು ಕೈಗೊಳ್ಳಬೇಕು. ಜತೆಗೆ ಮುಂಬರುವ ಲಾಕ್‌ಡೌನ್‌ ದಿನಗಳನ್ನು ಗಂಭೀರ ವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.

ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೇರಿ ಒಂಭತ್ತು ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್‌ ಮತ್ತಿತರಿದ್ದರು ವೀಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದರು. ಪ್ರಧಾನಿ ಜತೆ ಕೋಣೆಯಲ್ಲಿದ್ದ ಸಚಿವರು ಪರಸ್ಪರ 2 ಮೀಟರ್‌ ಅಂತರ ಕಾಯ್ದುಕೊಂಡು ಕುಳಿತುಕೊಂಡಿದ್ದು ವಿಶೇಷವಾಗಿತ್ತು.

ಪಿಎಂ ಕೇರ್‌ಗೆ ವಿದೇಶಿ ದೇಣಿಗೆ ಸ್ವೀಕಾರ
ಪಿಎಂ ಕೇರ್‌ಗೆ ವಿದೇಶಿ ದೇಣಿಗೆಯನ್ನು ಪಡೆಯಲಾಗುವುದು. ಈ ಬಗ್ಗೆ ಯಾವುದೇ ಗೊಂದಲ ಬೇಡ. ವಿದೇಶಿ ವ್ಯಕ್ತಿಗಳಿಂದ ವೈಯಕ್ತಿಕವಾಗಿ ಹಾಗೂ ಸಂಘ ಸಂಸ್ಥೆಗಳಿಂದ ನೆರವು ಸ್ವೀಕರಿಸಲಾಗುವುದು ಎಂದು ಕೇಂದ್ರ ಸರಕಾರ ಗುರುವಾರ ಸ್ಪಷ್ಟನೆ ನೀಡಿದೆ.

Advertisement

ವಿದೇಶಿ ದೇಣಿಗೆ ಸ್ವೀಕಾರ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಪ್ರಧಾನಿ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ವಿದೇಶಿ ದೇಣಿಗೆಯನ್ನು ಪಡೆಯಲಾಗುತ್ತಿತ್ತು. ಈ ನಿಯಮ ಪಿಎಂ ಕೇರ್‌ಗೂ ಕೂಡ ಅನ್ವಯ ಆಗುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Udayavani is now on Telegram. Click here to join our channel and stay updated with the latest news.

Next