ಸಾರ್ಕ್ ರಾಷ್ಟ್ರಗಳಲ್ಲಿ ಕೊರೊನಾ ವೈರಸ್ ನಿಯಂತ್ರಣ ಮತ್ತು ಮುನ್ನೆಚ್ಚರಿಕಾ ಕ್ರಮಗಳಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೀಗ ಸಾರ್ಕ್ ರಾಷ್ಟ್ರಗಳ ನಾಯಕರ ವಿಡಿಯೋ ಕಾನ್ಫೆರೆನ್ಸ್ ಸಭೆ ಇಂದು ನಡೆಯಿತು.
ಪ್ರಾರಂಭದಲ್ಲಿ ಈ ಸಭೆಯ ಉದ್ದೇಶವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇದರಲ್ಲಿ ಭಾಗಹಿಸಿದ್ದ ಸಾರ್ಕ್ ನಾಯಕರಿಗೆ ಮನವರಿಕೆ ಮಾಡಿಕೊಟ್ಟರು. ಬಳಿಕ ಒಂದೊಂದೇ ಸಾರ್ಕ್ ದೇಶದ ನಾಯಕರು ತಮ್ಮ ಅಭಿಪ್ರಾಯ, ಸಲಹೆ ಮತ್ತು ತಮ್ಮ ದೇಶದಲ್ಲಿ ಕೊರೊನಾ ವೈರಸ್ ಪರಿಸ್ಥಿತಿಯನ್ನು ತೆರೆದಿಟ್ಟರು.
ಈ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಮಾಲ್ಡೀವ್ ಅಧ್ಯಕ್ಷ ಇಬ್ರಾಹಿಂ ಮುಹಮ್ಮದ್ ಸೊಲಿಹ್, ಶ್ರೀಲಂಕಾ ಪ್ರಧಾನ ಮಂತ್ರಿ ಗೊಟಬಯ ರಾಜಪಕ್ಷೆ, ಭೂತಾನ್ ಪ್ರಧಾನಿ ಲೋಟೆ ತ್ಶೆರಿಂಗ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಭಾಗವಹಿಸಿದ್ದು ಪಾಕಿಸ್ಥಾನಿ ಪ್ರಧಾನಿ ಇಮ್ರಾನ್ ಖಾನ್ ಅವರು ಈ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಭಾಗವಹಿಸಿಲ್ಲ ಅವರು ತಮ್ಮ ಪ್ರತಿನಿಧಿಯಾಗಿ ಡಾ. ಝಾಫರ್ ಮಿರ್ಜಾ ಅವರನ್ನು ನಿಯೋಜಿಸಿದ್ದಾರೆ.
ಬಳಿಕ ಪ್ರಧಾನಿ ಮೋದಿ ಅವರು ಕೊರೊನಾ ವೈರಸ್ ಪಿಡುಗಿನ ವಿರುದ್ಧ ಹೋರಾಡಲು ಸಾಮಾನ್ಯ ನಿಧಿಯೊಂದನ್ನು ಸ್ಥಾಪನೆ ಮಾಡುವ ಪ್ರಸ್ತಾವನೆಯನ್ನು ಮಾಡಿದ್ದಲ್ಲದೆ ಈ ನಿಧಿಗೆ ಭಾರತದ ಪಾಲು 10 ಮಿಲಿಯನ್ ಅಮೆರಿಕನ್ ಡಾಲರ್ ಮೊತ್ತದ ಘೋಷಣೆಯನ್ನು ಮಾಡಿದರು.
ಉಳಿದಂತೆ ವೈರಸ್ ಸಂಶೋಧನಾ ಕೇಂದ್ರಗಳ ಸ್ಥಾಪನ, ಪರಸ್ಪರ ಮಾಹಿತಿ ವಿನಿಮಯ ಸೇರಿದಂತೆ ಹಲವಾರು ಸಲಹೆಗಳನ್ನು ಪ್ರಧಾನಿ ಮೋದಿ ಸೇರಿದಂತೆ ಸಾರ್ಕ್ ರಾಷ್ಟ್ರಗಳ ನಾಯಕರು ಈ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಈ ಸಭೆಯನ್ನು ಆಯೋಜಿಸಿದ್ದಕ್ಕಾಗಿ ಸಾರ್ಕ್ ರಾಷ್ಟ್ರಗಳ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದರು. ಇತ್ತೀಚೆಗಷ್ಟೇ ಶಸ್ತ್ರಚಿಕಿತ್ಸೆಗೊಳಗಾಗಿ ಇದೀಗ ಚೇತರಿಸಿಕೊಳ್ಳುತ್ತಿರುವ ನೇಪಾಳದ ಪ್ರಧಾನ ಮಂತ್ರಿ ಕೆ.ಪಿ. ಶರ್ಮಾ ಒಲಿ ಅವರು ಇಂದಿನ ಸಭೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.