Advertisement

ತಾರಕೇಶ್ವರದಲ್ಲಿಂದು ಮೋದಿ-ದೀದಿ ಮುಖಾಮುಖಿ.?ಕುತೂಹಲ ಹೆಚ್ಚಿಸಿದೆ ಉಭಯ ನಾಯಕರ ಪ್ರಚಾರ ಸಭೆ  

01:09 PM Apr 03, 2021 | Team Udayavani |

ತಾರಕೇಶ್ವರ :  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಹಾಗೂ ಬಿಜೆಪಿ ನಡುವೆ ದೊಡ್ಡ ಮಟ್ಟದಲ್ಲಿ ನೇರ ಹಣಾಹಣಿ ನಡೆಯುತ್ತಿದ್ದು, ಸದ್ಯ ಮೂರನೇ ಹಂತದ ಚುನಾವಣಾ ಪ್ರಚಾರದಲ್ಲಿ ಉಭಯ ಪಕ್ಷಗಳು ತೊಡಗಿವೆ.

Advertisement

ಪಶ್ಚಿಮ ಬಂಗಾಳದ ಅಧಿಕಾರ ಹಿಡಿಯಬೇಕು ಎಂಬ ಕಾರಣದಿಂದ ದೊಡ್ಡ ಮಟ್ಟದ ಚುನಾವಣಾ ಪ್ರಚಾರವನ್ನು ಮಾಡುವುದರ ಮೂಲಕ ಜನರನ್ನು ಓಲೈಸಿಕೊಳ್ಳುವ ಪ್ರಯತ್ನಗಳನ್ನು ಮಾಡುತ್ತಿವೆ. ದಿನನಿತ್ಯ ಪ್ರಚಾರ ಸಭೆಗಳಲ್ಲಿ ಉಭಯ ಪಕ್ಷಗಳ ಪ್ರಭಾವಿ ನಾಯಕರ ವಾಗ್ಯುದ್ಧಗಳು ಚುನಾವಣೆಯ ಬಗ್ಗೆ ಕುತೂಹಲವನ್ನು ಹೆಚ್ಚಿಸುವಂತೆ ಮಾಡುತ್ತಿವೆ.

ಓದಿ : ಈ ಪರಿಸ್ಥಿತಿಯಲ್ಲಿ ಭಾರತದ ಜತೆ ಯಾವುದೇ ವ್ಯವಹಾರ ಇಲ್ಲ: ಇಮ್ರಾನ್ ಖಾನ್

ಪಶ್ಚಿಮ ಬಂಗಾಳವನ್ನು ಬಿಟ್ಟುಕೊಡಬಾರದೆಂಬ ಪೈಪೋಟಿಯಲ್ಲಿ ಉಭಯ ಪಕ್ಷಗಳು ಪ್ರಚಾರದಲ್ಲಿ ತೊಡಗಿಕೊಂಡಿವೆ. ಈ ನಡುವೆ ಇಂದು ಹೂಗ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಖಾಮುಖಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ ಹೂಗ್ಲಿಯಲ್ಲಿ ಚುನಾವಣೆ  ಪ್ರಚಾರದಲ್ಲಿ ಭಾಗವಹಿಸುವುದರಿಂದ ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

Advertisement

ಇಂದು ಮಧ್ಯಾಹ್ನ 1:30 ರ ಹೊತ್ತಿಗೆ ಆರಬಾಂಗ್ ಲೋಕಸಭಾ ಕ್ಷೇತ್ರದ ತಾರಕೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರ ಸಭೆಯನ್ನು ನಡೆಸಲಿದ್ದು, 2:30 ರ ಹೊತ್ತಿಗೆ ತಾರಕೇಶ್ವರದ ಪಕ್ಕದಲ್ಲೇ ಇರುವ ಹರಿಪಾಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ.

ಒಟ್ಟಿನಲ್ಲಿ, ಉಭಯ ನಾಯಕರ ಆರೋಪ, ಪತ್ಯಾರೋಪಗಳ ಬಗ್ಗೆ ಕುತೂಹಲ ಮೂಡಿಸಿದೆ.

ಓದಿ : ಈಶ್ವರಪ್ಪರನ್ನು ಉಚ್ಚಾಟಿಸಿ ಇಲ್ಲವೇ ನೀವು ರಾಜೀನಾಮೆ ನೀಡಿ: ಸಿಎಂ ಗೆ ಡಿಕೆ ಶಿವಕುಮಾರ್ ಸವಾಲು

Advertisement

Udayavani is now on Telegram. Click here to join our channel and stay updated with the latest news.

Next