Advertisement

ಸಚಿವರು, ಸೇನಾ ಮುಖ್ಯಸ್ಥರ ಜತೆ ಪ್ರಧಾನಿ ಸಭೆ

02:01 AM Jun 18, 2020 | Hari Prasad |

ಹೊಸದಿಲ್ಲಿ: ಲಡಾಖ್‌ನ ಗಾಲ್ವಾನ್‌ ಕಣಿವೆಯಲ್ಲಿ ಚೀನದ ಸೇನಾಪಡೆಗಳೊಂದಿಗೆ ನಡೆದ ಕಾಳಗದಲ್ಲಿ ಭಾರತದ 20 ಯೋಧರು ಹುತಾತ್ಮರಾದ ಬಗ್ಗೆ ಸೇನೆ ದೃಢಪಡಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ನಾಲ್ವರು ಪ್ರಮುಖ ಸಚಿವರು ಹಾಗೂ ಸೇನಾ ಮುಖ್ಯಸ್ಥರ ಜತೆ ಸಭೆ ನಡೆಸಿದ್ದಾರೆ.

Advertisement

ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದ ಮಹತ್ವದ ಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಸೇನೆಯ ಚೀಫ್‌ ಜನರಲ್‌ ಎಂ.ಎಂ. ನರವಾನೆ ಅವರು ಪಾಲ್ಗೊಂಡಿದ್ದರು.

ಭಾರತ-ಚೀನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಬಳಿಕ ಮಂಗಳವಾರ ಪ್ರಧಾನಿ ಮೋದಿ, ಸರಣಿ ಸಭೆಗಳನ್ನು ನಡೆಸಿದ್ದು, ಆ ಪೈಕಿ ಇದು ದಿನದ ಕಡೆಯ ಸಭೆಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next