ನವದೆಹಲಿ : ಕೋವಿಡ್ ಎರಡನೇ ಅಲೆ ದೇಶದಲ್ಲಿ ತೂಫಾನ್ ರೀತಿಯಲ್ಲಿ ಹರಡುತ್ತಿದೆ. ಜನರ ರಕ್ಷಣೆಗಾಗಿ ಸರ್ಕಾರ ಆಕ್ಸಿಜನ್ ಉತ್ಪಾದನೆ ಮತ್ತು ಪೂರೈಕೆಗೆ ಕ್ರಮ ಕೈಗೊಂಡಿದೆ. ಜನವರಿ ಮತ್ತು ಫೆಬ್ರವರಿ ತಿಂಗಳುಗಳಲ್ಲಿ ಲಸಿಕೆಯ ಉತ್ಪಾದನೆ ಹೆಚ್ಚಾಯಿತು ಎಂದು ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಂಗಳವಾರ ರಾತ್ರಿ ಮಾತನಾಡಿದರು.
ಇನ್ನು ಕೋವಿಡ್ ಹೆಚ್ಚಳವಾಗುತ್ತಿದ್ದು, ಆಸ್ಪತ್ರೆಯಲ್ಲಿ ಬೆಡ್ ಗಳ ಹೆಚ್ಚಳದ ಬಗ್ಗೆಯೂ ಕ್ರಮ ಕೈಗೊಳ್ಳಲಾಗಿದೆ. ನಮ್ಮ ದೇಶದಲ್ಲಿ ವಿಶ್ವದ ಮಟ್ಟದಲ್ಲಿ ಅತಿ ಹೆಚ್ಚು ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ವಿಜ್ಞಾನಿಗಳು ಅತೀ ಕಡಿಮೆ ಸಮಯದಲ್ಲಿ ಲಸಿಕೆಯನ್ನು ಕಂಡು ಹಿಡಿದಿದ್ದಾರೆ. ಈ ಮೂಲಕ ಲಸಿಕೆ ಅಭಿಯಾನದ ಮೂಲಕ ವೇಗವಾಗಿ ವ್ಯಾಕ್ಸಿನ್ ವಿತರಣೆ ಮಾಡಲಾಗುತ್ತಿದೆ ಎಂದು ಮೋದಿ ತಿಳಿಸಿದರು.

ವ್ಯಾಕ್ಸಿನ್ ಅನ್ನು ಪ್ರತಿಯೊಬ್ಬ ಪ್ರಜೆಗೂ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ. ದಯಮಾಡಿ ಯಾರೂ ಗುಳೆ ಹೋಗಬೇಡಿ. ದೇಶದಲ್ಲಿ ನೀವು ಎಲ್ಲೇ ಇದ್ದರೂ ಅಲ್ಲಿಯೇ ಲಸಿಕೆ ಪಡೆಯಬಹುದು. ದೇಶದಲ್ಲಿ ಸಾಕಷ್ಟು ಮಟ್ಟದಲ್ಲಿ ಪಿಪಿಯಿ ಕಿಟ್ ಗಳನ್ನು ಉತ್ಪಾದನೆ ಮಾಡುತ್ತಿದೆ. ದೇಶದ ಯುವಕರೇ ಕೋವಿಡ್ ನಿಯಂತ್ರಿಸುವಲ್ಲಿ ಸರ್ಕಾರಕ್ಕೆ ಕೈಜೋಡಿಸಿ ಎಂದು ಮೋದಿ ಮನವಿ ಮಾಡಿದರು.
ದೇಶವನ್ನು ಲಾಕ್ ಡೌನಿಂದ ಬಚಾವ್ ಮಾಡಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರ ಹೋಗಬೇಡಿ. ಲಾಕ್ ಡೌನ್ ಎನ್ನುವುದು ಕೊನೆಯ ಅಸ್ತ್ರ ಎಂದು ಪ್ರಧಾನಿ ತಿಳಿಸಿದ್ದಾರೆ.