Advertisement

ವಿಮೋಚನಾ ದಿನದಂದು ಪ್ರಧಾನಿ ನರೇಂದ್ರ ಮೋದಿ ಗೋವಾಕ್ಕೆ

02:33 PM Nov 27, 2021 | Team Udayavani |

ಪಣಜಿ: ಗೋವಾದ 60 ನೇಯ ವಿಮೋಚನಾ ದಿನ ಡಿ.19 ರಂದು ಪ್ರಧಾನಿ ನರೇಂದ್ರ ಮೋದಿ ಗೋವಾ ಭೇಟಿ ಬಹುತೇಕ ಖಚಿತವಾಗಿದೆ.

Advertisement

ಪ್ರಧಾನಿ ಅವರ ಗೋವಾ ಭೇಟಿಯ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸುವ ಕುರಿತು ಸರ್ಕಾರಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಒಂದು ದಿನದ ಗೋವಾ ಭೇಟಿಯ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡಿರುವ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಪಣಜಿಯಲ್ಲಿ ಸುದ್ಧಿಗಾರರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಬಿಜೆಪಿ, ಕಾಂಗ್ರೆಸ್ ಒಪ್ಪಂದ ಮಾಡಿಕೊಂಡು ಸ್ಪರ್ಧೆಗಿಳಿದಿವೆ: ಪಕ್ಷೇತರ ಅಭ್ಯರ್ಥಿ ಲೋಣಿ

ಡಿಸೆಂಬರ್ 19 ರಂದು ಗೋವಾ ವಿಮೋಚನಾ ದಿನದ 60 ನೇಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಆಮಂತ್ರಿಸಿದೆ. ಅವರ ಸಮ್ಮುಖದಲ್ಲಿ ಆಯೋಜಿಸುವ ವಿವಿಧ ಕಾರ್ಯಕ್ರಮಗಳ ಕುರಿತು ಸರ್ಕಾರಿ ಅಧಿಕಾರಿಗಳೊಂದಿಗೆ ಸಿಎಂ ಸಾವಂತ್ ಸಭೆ ನಡೆಸಿದ್ದಾರೆ. ಪ್ರಧಾನಿ ಮೋದಿಯವರು ಗೋವಾ ವೈದ್ಯಕೀಯ ಕಾಲೇಜಿನ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಮತ್ತು ಆಗ್ವಾದ್ ಕೋಟೆಯ  ನವೀಕರಣ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಪಣಜಿಯ ಆಜಾದ ಮೈದಾನದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next