Advertisement

37th National Games ;ಉದ್ಘಾಟಿಸಲು ಗೋವಾಕ್ಕೆ ಪ್ರಧಾನಿ ನರೇಂದ್ರ ಮೋದಿ

04:58 PM Oct 19, 2023 | Team Udayavani |

ಪಣಜಿ: 37ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 26 ರಂದು ಗೋವಾಕ್ಕೆ ಆಗಮಿಸಲಿರುವುದರಿಂದ ಸಂಘಟಕರು ಉತ್ಸುಕರಾಗಿದ್ದಾರೆ. ಆದರೆ, ದಾಬೋಲಿಮ್ ವಿಮಾನ ನಿಲ್ದಾಣದಿಂದ ಫಟೋರ್ಡಾ-ಮಡ್ಗಾಂವ್‍ನ ನೆಹರು ಕ್ರೀಡಾಂಗಣದವರೆಗಿನ ರಸ್ತೆಯನ್ನು ಸುರಕ್ಷತೆಯ ದೃಷ್ಟಿಯಿಂದ ಅಕ್ಟೋಬರ್ 26 ರಂದು ಆರು ಗಂಟೆಗಳ ಕಾಲ ಸಂಚಾರಕ್ಕೆ ನಿರ್ಬಂಧಿಸಲಾಗಿದೆ.ಇದು ಜನಸಾಮಾನ್ಯರಿಗೆ ಆತಂಕದ ವಿಷಯವಾಗಲಿದೆ. ಇದಲ್ಲದೆ, ಗೋವಾದ ಪ್ರಮುಖ ಕೈಗಾರಿಕಾ ಎಸ್ಟೇಟ್ ಆಗಿರುವ ವೆರ್ಣಾ ಇಂಡಸ್ಟ್ರಿಯಲ್ ಎಸ್ಟೇಟ್ ಕಾರ್ಯಾಚರಣೆಯ ಮೇಲೂ ಪ್ರತಿಕೂಲ ಪರಿಣಾಮ ಬೀರಬಹುದು.

Advertisement

ವಿಶೇಷವಾಗಿ ಔಷಧೀಯ ಉದ್ಯಮಕ್ಕೆ ಭಾರಿ ಹೊಡೆತ ಬೀಳುವ ನಿರೀಕ್ಷೆಯಿದೆ. ಅಕ್ಟೋಬರ್ 26ರ ಗುರುವಾರ ಉದ್ಘಾಟನಾ ಸಮಾರಂಭ ನಡೆಯಲಿದೆ. ಆರಂಭದಲ್ಲಿ ಪ್ರಧಾನಿ ಮೋದಿಯವರನ್ನು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ನೇರವಾಗಿ ಫಟೋರ್ಡಾಗೆ ಬರಮಾಡಿಕೊಳ್ಳುವ ಯೋಜನೆ ರೂಪಿಸಲಾಗಿತ್ತು. ಆದರೆ ಇದು ಇನ್ನೂ ಖಚಿತವಾಗಿಲ್ಲ. ಹಾಗಾಗಿ ರಸ್ತೆ ಮೂಲಕವೇ ಉದ್ಘಾಟನೆಗೆ ಮೋದಿ ಬರಬಹುದು. ಹೀಗಾಗಿ ರಸ್ತೆ ಬಂದ್ ಮಾಡಲು ಆಡಳಿತ ಮಂಡಳಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ದಕ್ಷಿಣ ಗೋವಾ ಜಿಲ್ಲಾಡಳಿತ ಅಧಿಕೃತವಾಗಿ ಈ ಬಗ್ಗೆ ಇನ್ನೂ ಘೋಷಣೆ ಮಾಡದಿದ್ದರೂ, ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿಯವರು ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಬರಬಹುದು ಎಂದು ಭಾವಿಸಿ ವಿಮಾನ ನಿಲ್ದಾಣ-ವೆರ್ಣಾ ರಾಷ್ಟ್ರೀಯ ಹೆದ್ದಾರಿ ಮತ್ತು ವೆರ್ನಾ-ಮಡ್ಗಾಂವ್ ರಾಷ್ಟ್ರೀಯ ಹೆದ್ದಾರಿಯನ್ನು ಮಧ್ಯಾಹ್ನ 2.30 ರಿಂದ ರಾತ್ರಿ 8.30 ರವರೆಗೆ ಸಂಚಾರಕ್ಕೆ ನಿರ್ಬಂಧ ಹೇಲಾಗುವುದಾಗಿ ಮಾಹಿತಿ ಲಭ್ಯವಾಗಿದ್ದು, ಈ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಈ ಪ್ರದೇಶವನ್ನು ಸಂಚಾರಕ್ಕೆ ಮುಚ್ಚುವ ನಿರ್ಧಾರವನ್ನು ಜಿಲ್ಲಾಧಿಕಾರಿ ಮಟ್ಟದಲ್ಲಿ ನಿರ್ಣಯ ತೆಗೆದುಕೊಳ್ಳಲಾಗುತ್ತಿದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next