Advertisement

ಕೃಷಿ ಚಟುವಟಿಕೆಗಳಿಗೆ ಉತ್ತೇಜನ: ನಾಳೆ ಪ್ರಧಾನಿಯಿಂದ 1 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ

11:04 PM Aug 08, 2020 | Hari Prasad |

ನವದೆಹಲಿ: ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಉತ್ತೇಜನವನ್ನು ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಇನ್ನೊಂದು ಹೆಜ್ಜೆ ಮುಂದಿಟ್ಟಿದೆ.

Advertisement

ಬೆಳೆ ಕಟಾವು ಬಳಿಕದ ಕೃಷಿ ಚಟುವಟಿಕೆಗಳನ್ನು ಇನ್ನಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ‘ಅಗ್ರಿ ಇನ್ ಫ್ರಾ ಫಂಡ್’ನಡಿಯಲ್ಲಿ ಒಂದು ಲಕ್ಷ ಕೋಟಿ ರೂಪಾಯಿಗಳ ಹಣಕಾಸು ನೆರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆದಿತ್ಯವಾರದಂದು ವಿಡಿಯೋ ಕಾನ್ಫೆರನ್ಸ್ ಮೂಲಕ ಈ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.

ಈ ಯೋಜನೆಯು ರೈತರು ಬೆಳೆದ ಬೆಳೆಗಳನ್ನು ಸೂಕ್ತವಾಗಿ ಸಂರಕ್ಷಿಸಿಡಲು ಅಗತ್ಯವಿರುವ ಕೋಲ್ಡ್ ಸ್ಟೋರೇಜ್ ಗಳು, ಉತ್ಪನ್ನ ಸಂಗ್ರಹ ಕೇಂದ್ರಗಳು, ಸಂಸ್ಕರಣಾ ವಿಭಾಗಗಳು ಸೇರಿದಂತೆ ಬೆಳೆಗಳಿಗೆ ಪೂರಕವಾಗಿರುವ ವ್ಯವಸ್ಥೆಗಳನ್ನು ತಳಮಟ್ಟದಲ್ಲಿ ರೂಪಿಸಲು ಈ ನಿಧಿ ಸಹಕಾರಿಯಾಗಲಿದೆ ಎಂಬ ಮಾಹಿತಿಯನ್ನು ಪ್ರಧಾನಮಂತ್ರಿಯವರ ಕಛೇರಿ ನೀಡಿದೆ.

ಈ ಮೂಲಕ ದೇಶದ ರೈತರು ತಾವು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಮೌಲ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗಲಿದೆ. ಅಂದರೆ, ತಮ್ಮ ಬೆಳೆಗಳನ್ನು ವೈಜ್ಞಾನಿಕ ವಿಧಾನದಲ್ಲಿ ಶೇಖರಿಸಿ ಬಳಿಕ ಅವುಗಳಿಗೆ ಮಾರುಕಟ್ಟೆಯಲ್ಲಿ ಅಧಿಕ ಬೇಡಿಕೆ ಸೃಷ್ಟಿಯಾದ ಸಂಧರ್ಭದಲ್ಲಿ ಅವುಗಳನ್ನು ಮಾರಾಟ ಮಾಡಲು ನಮ್ಮ ರೈತರಿಗೆ ಈ ಯೋಜನೆಯಿಂದ ರಚನೆಯಾಗುವ ವ್ಯವಸ್ಥೆ ಸಹಕಾರಿಯಾಗಲಿದೆ.

ಇದರಿಂದಾಗಿ ಕೃಷಿ ಉತ್ಪನ್ನಗಳು ಬೇಡಿಕೆ ಕಳೆದುಕೊಂಡು ಅವುಗಳನ್ನು ಬೆಳೆದ ರೈತರು ಸಂಕಷ್ಟಕ್ಕೆ ಒಳಗಾಗುವುದು ತಪ್ಪಲಿದೆ. ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣಾ ಗುಣಮಟ್ಟ ಸುಧಾರಣೆಗೊಳ್ಳುವ ಮೂಲಕ ಅವುಗಳ ಮೌಲ್ಯವರ್ಧನೆಗೂ ಈ ವ್ಯವಸ್ಥೆ ಸಹಕಾರಿಯಾಗಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next