ನವದೆಹಲಿ: ಘೋರ ದುರಂತ ನಡೆದ ಗುಜರಾತ್ ನ ಮೊರ್ಬಿ ಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ನವೆಂಬರ್ 1) ರಂದು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಬ್ರಿಟಿಷರ ಕಾಲದ ಸೇತುವೆ ಭಾನುವಾರ ಸಂಜೆ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 141ಕ್ಕೆ ಏರಿದೆ.177 ಜನರನ್ನು ರಕ್ಷಿಸಲಾಗಿದೆ ಮತ್ತು ಇನ್ನೂ ನಾಪತ್ತೆಯಾಗಿರುವ ಹಲವರಿಗಾಗಿ ತಂಡಗಳು ಹುಡುಕಾಟ ನಡೆಸುತ್ತಿವೆ.
ಇದನ್ನೂ ಓದಿ : ಮೊರ್ಬಿ ಸೇತುವೆ ಕುಸಿತ ದುರಂತ: ರಕ್ಷಣಾ, ಪರಿಹಾರ ಕಾರ್ಯದಲ್ಲಿ ಅಸಡ್ಡೆ ಇಲ್ಲ: ಪ್ರಧಾನಿ ಮೋದಿ
ಕಾಣೆಯಾದವರ ಪತ್ತೆಗೆ ಎನ್‌ಡಿಆರ್‌ಎಫ್‌ನ ಐದು ತಂಡಗಳು ರಾತ್ರಿಯಿಡೀ ಶ್ರಮಿಸಿದವು. ನಂತರ ಸೇನೆ, ನೌಕಾಪಡೆ ಮತ್ತು ವಾಯುಪಡೆ ಕೂಡ ಕಾರ್ಯಾಚರಣೆಗೆ ಕೈಜೋಡಿಸಿದೆ.
ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಸಂತ್ರಸ್ತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ.