Advertisement

23-27ರ ವರೆಗೆ ಪಿಎಂ ವಿದೇಶ ಪ್ರವಾಸ

06:00 AM Jul 21, 2018 | Team Udayavani |

ನವದೆಹಲಿ/ಬೀಜಿಂಗ್‌: ಪ್ರಸಕ್ತ ಸಾಲಿನ ಬ್ರಿಕ್ಸ್‌ ರಾಷ್ಟ್ರಗಳ ಸಮ್ಮೇಳನ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದ್ದು, ಅದರಲ್ಲಿ ಭಾಗವಹಿಸಲೋಸುಗ ಪ್ರಧಾನಿ ನರೇಂದ್ರ ಮೋದಿ ತೆರಳಲಿದ್ದಾರೆ. ಜು.23-27ರ ವರೆಗೆ ಅವರು ವಿದೇಶ ಪ್ರವಾಸದಲ್ಲಿ ಇರಲಿದ್ದಾರೆ. ವಿದೇಶ ಪ್ರವಾಸದ ಮೊದಲ ಹಂತವಾಗಿ ಪ್ರಧಾನಿ ಮೋದಿ ರವಾಂಡಾಕ್ಕೆ ಭೇಟಿ ನೀಡಲಿದ್ದಾರೆ. ಅವರು ರವಾಂಡಕ್ಕೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು, ಅಲ್ಲಿ 2 ದಿನಗಳ ಕಾಲ ಇರಲಿದ್ದಾರೆ.

Advertisement

ನಂತರ ಜು.24ಕ್ಕೆ ಉಗಾಂಡಾಕ್ಕೆ ತೆರಳಲಿದ್ದಾರೆ. ಬಳಿಕ ದಕ್ಷಿಣ ಆಫ್ರಿಕದ ಜೊಹಾನ್ಸ್‌ಬರ್ಗ್‌ನಲ್ಲಿ  ನಡೆಯಲಿರುವ ಬ್ರಿಕ್ಸ್‌ ರಾಷ್ಟ್ರಗಳ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.  ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ನಡುವೆ ದ್ವಿಪಕ್ಷೀಯ ಮಾತುಕತೆ ಬಗ್ಗೆ ಸದ್ಯ ಏನನ್ನೂ ತೀರ್ಮಾನಿಸಲಾಗಿಲ್ಲ ಎಂದು ವಿದೇಶಾಂಗ ಇಲಾಖೆ ನವದೆಹಲಿಯಲ್ಲಿ ತಿಳಿಸಿದೆ. ಆದರೆ ಬೀಜಿಂಗ್‌ನಲ್ಲಿ ಪ್ರತಿಕ್ರಿಯೆ ನೀಡಿದ ಚೀನಾ ವಿದೇಶಾಂಗ ಇಲಾಖೆ ವಕ್ತಾರ, “ಬ್ರಿಕ್ಸ್‌ ರಾಷ್ಟ್ರಗಳ ಸಮ್ಮೇಳನದ ವೇಳೆ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಲಿದ್ದಾರೆ’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next