Advertisement
ಎ.13ರಂದು ಮಧ್ಯಾಹ್ನ 2.45ಕ್ಕೆ ಮಧುರೈಯಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಪ್ರಧಾನಿ ಮೋದಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4 ಗಂಟೆಗೆ ತಲುಪಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಕೇಂದ್ರ ಮೈದಾನಕ್ಕೆ ಆಗಮಿಸಿ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಲಿದ್ದಾರೆ. 5.20ರ ಸುಮಾರಿಗೆ ಬಜಪೆಗೆ ಆಗಮಿಸಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ತಿಳಿದುಬಂದಿದೆ.ಕಾರ್ಯಕ್ರಮದಲ್ಲಿ ಪ್ರಧಾನಿ ಅವರಿಗೆ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಸಮ್ಮಾನ ನಡೆಯಲಿದ್ದು, ತುಳುನಾಡನ್ನು ನೆನಪಿಸುವ ವಿಶೇಷ ಸ್ಮರಣಿಕೆ ನೀಡಲು ನಿರ್ಧರಿಸಲಾಗಿದೆ.
ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ ನಗರದಲ್ಲಿ 5 ಎಸ್‌ಪಿ/ಡಿಸಿಪಿ, 10 ಡಿವೈಎಸ್‌ಪಿ/ಎಸಿಪಿ, 36 ಪಿಐಗಳು, 67 ಪಿಎಸ್‌ಐ, 147 ಎಎಸ್‌ಐ, 1207 ಎಚ್‌ಸಿ/ಪಿಸಿ ಸಹಿತ ಒಟ್ಟು 1,472 ಪೊಲೀಸ್ ಅಧಿಕಾರಿಗಳು ಮತ್ತು ಸಿಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. 92 ಎಚ್‌ಐ, 5 ಕೆಎಸ್‌ಆರ್‌ಪಿ ತುಕಡಿ, 19 ಸಿಎಆರ್ ತುಕಡಿ ಹಾಗೂ 2 ಸಿಆರ್‌ಪಿಎಫ್ ತುಕಡಿಗಳ ಅಧಿಕಾರಿ ಮತ್ತು ಸಿಬಂದಿಗಳನ್ನು ನೇಮಿಸಲಾಗಿದೆ. ಜತೆಗೆ, 4 ಎಎಸ್‌ಸಿ ತಂಡ, 1 ಬಿಡಿಎಸ್ ತಂಡ, 30 ಡಿಎಫ್‌ಎಂಡಿ/ 30 ಎಚ್‌ಎಚ್‌ಎಂಡಿಯನ್ನು ಕಾರ್ಯಕ್ರಮ ನಡೆಯುವ ಸ್ಥಳ, ವಿಮಾನ ನಿಲ್ದಾಣ ಹಾಗೂ ವಿವಿಐಪಿ ಸಂಚರಿಸುವ ಸ್ಥಳದ ತಪಾಸಣೆಗೆ ನೇಮಿಸಲಾಗಿದೆ. ನಗರದ ಬಂದೋಬಸ್ತು ಕರ್ತವ್ಯದಲ್ಲಿ ಒಟ್ಟು 34 ಸೆಕ್ಟರ್ ಮೊಬೈಲ್‌ಗಳು ಹಾಗೂ 144 ಸೂಕ್ಷ್ಮ ಪ್ರದೇಶಗಳಲ್ಲಿ ಪಿಕೆಟಿಂಗ್ ಪಾಯಿಂಟ್‌ಗಳು ಕಾರ್ಯ ನಿರ್ವಹಿಸಲಿದೆ.