Advertisement

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

12:36 PM Apr 23, 2024 | Team Udayavani |

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಬೆಳಗಾವಿಯಲ್ಲಿ ಬಿಜೆಪಿ ವಕ್ತಾರ ಎಂ. ಬಿ. ಜಿರಲಿ ಹೇಳಿಕೆ ನೀಡಿದ್ದಾರೆ.

Advertisement

ಬೆಳಿಗ್ಗೆ 11.30 ಕ್ಕೆ ಬೆಳಗಾವಿಗೆ ಆಗಮಿಸುವ ಪ್ರಧಾನಿಗಳು 12 ಗಂಟೆಗೆ ಬಿ. ಎಸ್. ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿ ಮೈದಾನದಲ್ಲಿ ಲಕ್ಷಾಂತರ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ ಅಗರವಾಲ, ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮೊದಲಾದ ನಾಯಕರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Advertisement

Udayavani is now on Telegram. Click here to join our channel and stay updated with the latest news.

Next