Advertisement

ಸೆ. 2ಕ್ಕೆ ಪ್ರಧಾನಿ ಮಂಗಳೂರಿಗೆ : ವಾಹನ ಸಂಚಾರದಲ್ಲಿ ಬದಲಾವಣೆ, ಇಲ್ಲಿದೆ ವಿವರ

12:46 PM Aug 31, 2022 | Team Udayavani |

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಯವರ ಸುಗಮ ಸಂಚಾರ ಮತ್ತು ಭದ್ರತೆ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಹಾಗೂ ಸಂಚಾರ ಸುವ್ಯವಸ್ಥೆಗಾಗಿ ಅಂದು ಬೆಳಿಗ್ಗೆ 6 ರಿಂದ ಕಾರ್ಯಕ್ರಮ ಮುಗಿಸಿ ಪ್ರಧಾನಿ ನಿರ್ಗಮನದ ವರೆಗೆ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಿ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

Advertisement

ಪ್ರಧಾನಿ ಕ್ರಾಯಕ್ರಮಕ್ಕೆ ಆಗಮಿಸುವ ವಾಹನಗಳ ಪಾರ್ಕಿಂಗ್ ಗೆ ಸೂಕ್ತ ವ್ಯವಸ್ಥೆಯನ್ನು ಆಯಾಯ ಪ್ರದೇಶದಲ್ಲಿ ನಡೆಸಲಾಗಿದ್ದು ಅದರಂತೆ ನಿತ್ಯ ಸಂಚರಿಸುವ ವಾಹನಗಳ ಮಾರ್ಗಗಳ ಸಂಪೂರ್ಣವಿವರ ಇಲ್ಲಿದೆ.

ಎಲ್ಲೆಲ್ಲಿ ವಾಹನ ಸಂಚಾರ ನಿಷೇಧ :

1. ಮಂಗಳೂರು ವಿಮಾನ ನಿಲ್ದಾಣದಿಂದ ಕಂಜಾರು – ಮರವೂರು – ಮರಕಡ – ಕಾವೂರು – ಬೊಂದೇಲ್ – ಪದವಿನಂಗಡಿ – ಯೆಯ್ಯಾಡಿ – ರಾಷ್ಟ್ರೀಯ ಹೆದ್ದಾರಿ 66 ರ ಕ.ಪಿ.ಟಿ. ಜಂಕ್ಷನ ನಿಂದ – ಕೊಟ್ಟಾರ ಚೌಕಿ ಕೂಳೂರು – ಎನ್.ಎಂ.ಪಿ.ಎ. ವರೆಗೆ ಹಾದು ಹೋಗುವ ರಸ್ತೆಗಳ ಎರಡೂ ಬದಿಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ಬೆಳಗ್ಗೆ 06:00 ಗಂಟೆಯಿಂದ ಸಂಜೆ 6:00 ಯ ತನಕ ನಿಷೇಧಿಸಿದೆ .

2. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಂಗ್ರಕೂಳೂರು ಗೋಲ್ಡ್ ಪಿಂಚ್ ಮೈದಾನದ ಮತ್ತು ಸುತ್ತಲಿನ 500 ಮೀಟರ್ ವ್ಯಾಪ್ತಿಯ ರಸ್ತೆಗಳಲ್ಲಿ ಸೆ. ೨ ರ ಮುಂಜಾನೆ 06.00 ಗಂಟೆಯಿಂದ ಸಂಜೆ 5:00 ಯ ತನಕ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ.

Advertisement

3. ಬಂಗ್ರ ಕೂಳೂರು ಗೋಲ್ಡ್ ಪಿಂಚ್ ಸಿಟಿ ಮೈದಾನದ ಸಾರ್ವಜನಿಕ ಸಮಾವೇಶಕ್ಕೆ ಆಗಮಿಸುವ ಅತೀ ಗಣ್ಯ ವ್ಯಕ್ತಿಗಳು , ಗಣ್ಯ ವ್ಯಕ್ತಿಗಳು , ಫಲಾನುಭವಿಗಳು ಮತ್ತು ಸಾರ್ವಜನಿಕರು ಉಪಯೋಗಿಸುವ ವಾಹನಗಳನ್ನು , ನಿಗದಿತ ಪಾರ್ಕಿಂಗ್ ಸ್ಥಳಗಳಿಗೆ ಸಂಚರಿಸಲು ಮತ್ತು ತುರ್ತು ಸೇವೆಯ ವಾಹನಗಳು ಮೇಲ್ಕಂಡ ನಿಷೇಧಿತ ರಸ್ತೆಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ .

ವಾಹನಗಳ ಪಾರ್ಕಿಂಗ್ ಸ್ಥಳದ ವಿವರ

ಎಲ್ಲೆಲ್ಲಿ ಸಂಚಾರ ಮಾರ್ಗ ಬದಲಾವಣೆ

 

Advertisement

Udayavani is now on Telegram. Click here to join our channel and stay updated with the latest news.

Next