Advertisement
ಪ್ರಧಾನಿಯವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದು ಅಲ್ಲಿಂದಲೇ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಿದರು. ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿ ಅದೇ ಹೆಲಿಕಾಪ್ಟರ್‌ನಲ್ಲಿ ಹಿಂದಿರುಗಿ ವಾಯು ಪಡೆಯ ವಿಮಾನದಲ್ಲಿ ಬೆಂಗಳೂರಿಗೆ ನಿರ್ಗಮಿಸಿದರು. ಅವರು ವಿಮಾನ ನಿಲ್ದಾಣದಿಂದ ಹೊರಗೆ ಬಾರದಿದ್ದರೂ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಕಾವಲು ಏರ್ಪಡಿಸಲಾಗಿತ್ತು.
ಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ವಾಹನಗಳ ಪಾರ್ಕಿಂಗ್‌ಗೆ ನಿರ್ಬಂಧ ವಿಧಿಸಲಾಗಿತ್ತು. ವಿಮಾನ ನಿಲ್ದಾಣದ ಹೊರ ಭಾಗದಲ್ಲಿಯೂ ಅಗ್ನಿ ಶಾಮಕ ವಾಹನಗಳು, ಆ್ಯಂಬುಲೆನ್ಸ್ ಮತ್ತು ಪೊಲೀಸ್ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಡಿಜಿಪಿ ಆರ್.ಕೆ. ದತ್ತಾ ಅವರು ಶನಿವಾರ ಜಿಲ್ಲೆಗೆ ಆಗಮಿಸಿದ್ದು, ಮಂಗಳೂರು ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಬಗ್ಗೆ ಮಾರ್ಗದರ್ಶನ ನೀಡಿದ್ದರು. ರವಿವಾರ ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಬಳಿ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ನೇತೃತ್ವದಲ್ಲಿ ಡಿಸಿಪಿಗಳಾದ ಹನುಮಂತರಾಯ ಮತ್ತು ಉಮಾ ಪ್ರಶಾಂತ್, ಎಸಿಪಿಗಳಾದ ಉದಯ ನಾಯ್ಕ, ಕೆ. ರಾಮ ರಾವ್, ರಾಜೇಂದ್ರ ಡಿ.ಎಸ್., ಮಂಜುನಾಥ ಶೆಟ್ಟಿ ಮಾರ್ಗದರ್ಶನದಲ್ಲಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.