Advertisement

PM Visit: ಫೆ.6 ರಂದು ಪ್ರಧಾನಿ ನರೇಂದ್ರ ಮೋದಿ ಗೋವಾಕ್ಕೆ ಭೇಟಿ

05:48 PM Feb 05, 2024 | Team Udayavani |

ಪಣಜಿ: ಪ್ರಧಾನಿ ನರೇಂದ್ರ ಮೋದಿ ಫೆ.6 ರ ಮಂಗಳವಾರ ಗೋವಾಕ್ಕೆ ಆಗಮಿಸಲಿದ್ದಾರೆ. ದಕ್ಷಿಣ ಗೋವಾದ ಮಡಗಾಂವ್‌ ಗೆ ಆಗಮಿಸಲಿರುವ ಅವರು ರಾಜ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮೋದಿ ಉದ್ಘಾಟಿಸಲಿದ್ದಾರೆ. ಬಳಿಕ ಮಡಗಾಂವ್‌ ನಲ್ಲಿ ಅವರು ಬೃಹತ್ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಸುಮಾರು 50,000 ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ಸಾಧ್ಯತೆಯನ್ನು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವ್ಯಕ್ತಪಡಿಸಿದ್ದಾರೆ.

Advertisement

ಇದೇ ವೇಳೆ ಮೋದಿ ಗೋವಾ ಭೇಟಿ ಹಿನ್ನೆಲೆ ನಾಯಿ, ಹಸುಗಳನ್ನು ರಸ್ತೆಗೆ ಬಿಡದಂತೆ ಸರ್ಕಾರ ಸೂಚಿಸಿದೆ. ಪ್ರಧಾನ‌ಮಂತ್ರಿ ಮೋದಿ ಸಂಚರಿಸುವ ಮಾರ್ಗದ ರಾಷ್ಟ್ರೀಯ ಹೆದ್ದಾರಿ 17ರ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಪಂಚಾಯಿತಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಬೀದಿ ನಾಯಿಗಳು, ಹಸುಗಳು ಹೆದ್ದಾರಿಯಲ್ಲಿ ಬರದಂತೆ ಎಚ್ಚರಿಕೆ ವಹಿಸಬೇಕು. ಅಲ್ಲದೆ, ಹೆದ್ದಾರಿಯುದ್ದಕ್ಕೂ ಕಸ ಎಸೆಯದಂತೆ ಸೂಚಿಸಲಾಗಿದೆ.

ಫೆಬ್ರವರಿ 6 ರಂದು ಈ ಸೂಚನೆಗಳನ್ನು ಅನುಸರಿಸಲು ಸಲಹೆ ನೀಡಲಾಗುತ್ತದೆ. ಪ್ರಧಾನಿ ಅವರ ಬೆಂಗಾವಲು ಪಡೆ ನುವೆಯಿಂದ ಬೆತುಲ್‍ಗೆ ಪ್ರಯಾಣಿಸಿ ಅದೇ ಮಾರ್ಗವಾಗಿ ಹಿಂದಿರುಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆ.6 ರ ಬೆಳಿಗ್ಗೆ 10. 30 ಕ್ಕೆ ಒಎನ್‍ಜಿಸಿ ಸರ್ವೈವಲ್ ಕೇಂದ್ರ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 10. 45 ಕ್ಕೆ ಇಂಡಿಯಾ ಎನರ್ಜಿ ವೀಕ್ 2024 ಉದ್ಘಾಟಿಸಲಿದ್ದಾರೆ.

ಮಧ್ಯಾಹ್ನ 2. 45ಕ್ಕೆ ಡೆವಲಪ್ ಇಂಡಿಯಾ, ಡೆವಲಪ್ ಗೋವಾ 2047 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗೋವಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ 1330 ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಗೋವಾಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಮಂಗಳವಾರ ಮಡಗಾಂವ್‍ನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬಳಿಕ ಮಡಗಾಂವ್‍ನ ಎಲ್ಲಾ ಕಾಲೇಜುಗಳನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಚ್ಚುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

Advertisement

ಆ ನಂತರ 12 ಗಂಟೆಯವರೆಗೆ ಮಡಗಾಂವ್‍ನಲ್ಲಿರುವ ಕಾಲೇಜುಗಳನ್ನು ಮುಚ್ಚಿ ಕೆಟಿಸಿ ಬಸ್ ನಿಲ್ದಾಣದಲ್ಲಿ ನಡೆಯುವ ಮೋದಿ ಸಭೆಗೆ ವಿದ್ಯಾರ್ಥಿಗಳನ್ನು ಕಳುಹಿಸಿಕೊಡಿ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ, ವಿದ್ಯಾರ್ಥಿಗಳು ಸ್ಥಳದಲ್ಲಿ ಲಭ್ಯವಿರುವ ಆಹಾರವನ್ನು ಸಹ ಆನಂದಿಸಬಹುದು ಎಂದು ತಿಳಿಸಲಾಗಿದೆ.

ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಮಡಗಾಂವ್‌ ನಲ್ಲಿ ಮೋದಿಯವರ ಸಭೆಗೆ ಕನಿಷ್ಠ 50 ಸಾವಿರ ಜನರು ಭಾಗವಹಿಸುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಮೋದಿಯವರ ಭೇಟಿ ರಾಜಕೀಯ ಅಲ್ಲ ಎಂದು ಸಾವಂತ್ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next