Advertisement
ನವಮಂಗಳೂರು ಬಂದರಿನಲ್ಲಿ ಪೂರ್ಣಗೊಂಡಿರುವ ಅನಘಾ ರಿಫೈನರಿ, ಬರ್ತ್ ನಂ.14 ಸೇರಿದಂತೆ 6 ಯೋಜನೆಗಳನ್ನು ಪ್ರಧಾನಿ ಲೋಕಾರ್ಪಣೆಗೊಳಿಸುವರು. ಸಾಗರಮಾಲಾ ಯೋಜನೆಯ ಕೆಲವು ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸುವರು.
ಬಳಿಕ ನಡೆಯುವ ಬೃಹತ್ ಸಮಾವೇಶದಲ್ಲಿ ಪ್ರಧಾನಿ ಪಾಲ್ಗೊಳ್ಳುವರು. ಸಮಾವೇಶ ಕೂಳೂರಿನ ಗೋಲ್ಡ್‌ಫಿಂಚ್ ಮೈದಾನ ದಲ್ಲಿ ನಡೆಯುವ ಸಂಭವವಿದ್ದು, ಸುಮಾರು 5 ಲಕ್ಷ ಮಂದಿ ಸೇರುವ ಸಾಧ್ಯತೆ ಇದೆ. ಪ್ರಧಾನಿ ಭೇಟಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ದೃಢಪಡಿಸಿದ್ದು ಭದ್ರತೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಆರಂಭಿಸಲಾಗಿದೆ. ಸೆ. 2ರಂದು ಕೊಚ್ಚಿಯಲ್ಲೂ ಪ್ರಧಾನಿ ಯವರ ಕಾರ್ಯಕ್ರಮ ನಿಗದಿಯಾಗಿದೆ. ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ದೇಶದ ಪ್ರಥಮ ಸ್ವದೇಶಿ ನಿರ್ಮಿತ ಐಎನ್‌ಎಸ್ ವಿಕ್ರಾಂತ್ ಯುದ್ಧವಿಮಾನ ವಾಹಕ ನೌಕೆಯನ್ನು ಬೆಳಗ್ಗೆ ಲೋಕಾರ್ಪಣೆ ಮಾಡುವರು. ಮಧ್ಯಾಹ್ನದ ಬಳಿಕ ಮಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ ಹೊಸದಿಲ್ಲಿಗೆ ತೆರಳುವ ಸಾಧ್ಯತೆ ಇದೆ.
Related Articles
Advertisement
ಕರಾವಳಿಯಲ್ಲಿ ಮೋದಿಯವರ ಮೊದಲ ಸರಕಾರಿ ಕಾರ್ಯಕ್ರಮಮೋದಿ ಪ್ರಧಾನಿಯಾಗಿ ಅವಿ ಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು. 2017ರ ಅ.29ರಂದು ಉಜಿರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸ್ವಸಹಾಯ ಸಂಘಗಳ ಸಮಾವೇಶ ದಲ್ಲಿ ಭಾಗವಹಿಸಿದ್ದರು. 2021ರ ಜ. 5ರಂದು ಮಂಗಳೂರಿನಲ್ಲಿ ನಿಗದಿಯಾಗಿದ್ದ ಕೊಚ್ಚಿನ್- ಮಂಗಳೂರು ಅನಿಲ ಕೊಳವೆ ಮಾರ್ಗ ಯೋಜನೆಯನ್ನು ದಿಲ್ಲಿಯಿಂ ದಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ್ದರು. 2016 ರಲ್ಲಿ ಕೇರಳದ ಕೊಚ್ಚಿಗೆ ತೆರಳುವ ಹಾದಿಯಲ್ಲಿ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದು ಕಾರ್ಯಕರ್ತರನ್ನು ಭೇಟಿ ಯಾಗಿದ್ದರು. 2017ರ ಡಿ.18 ರಂದು ಲಕ್ಷದ್ವೀಪಕ್ಕೆ ತೆರಳುವ ಹಾದಿಯಲ್ಲಿ ಮಂಗಳೂರಿನ ಸರ್ಕ್ನೂಟ್ ಹೌಸ್‌ನಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದರು. 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಪ್ರಚಾರಕ್ಕೆ ಆಗಮಿಸಿ ಮಂಗಳೂರಿಗೆ ಆಗಮಿಸಿ ನೆಹರೂ ಮೈದಾನಿನಲ್ಲಿ ಮಾತನಾಡಿದ್ದರು.