ಬೆಂಗಳೂರು: ನವೆಂಬರ್ 11ಕ್ಕೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಆಗಮಿಸಲಿದ್ದು, ಕೆಂಪೇಗೌಡರ ಪ್ರಗತಿ ಪ್ರತಿಮೆ ಉದ್ಘಾಟಿಸಲಿದ್ದಾರೆ.
ವಿಧಾನಸೌಧ ಮುಂಭಾಗದಲ್ಲಿ ನಡೆದ ಕೆಂಪೇಗೌಡ ಪ್ರಗತಿ ಪ್ರತಿಮೆಗಾಗಿ ಮೃತ್ತಿಕೆ ಸಂಗ್ರಹಣಾ ವಾಹನಗಳಿಗೆ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಈ ವಿಚಾರ ಪ್ರಕಟಿಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕೆಂಪೇಗೌಡ ಪ್ರಗತಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ನವೆಂಬರ್ 11 ರಂದು ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಈ ವೇದಿಕೆ ಮೂಲಕ ಆಹ್ವಾನ ನೀಡುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ:ಟಿ20 ವಿಶ್ವಕಪ್ ನಲ್ಲಿ ಅಚ್ಚರಿಯ ಫಲಿತಾಂಶ: ಐರ್ಲೆಂಡ್ ಸೂಪರ್ 12ಗೆ, ವೆಸ್ಟ್ ಇಂಡೀಸ್ ಮನೆಗೆ
ಕೆಂಪೇಗೌಡ ಜಗತ್ತಿನ ಅತಿಶ್ರೇಷ್ಠ ನಗರ ನಿರ್ಮಾತೃ. ಬೆಂಗಳೂರು ಇಂದು ಈ ಮಟ್ಟಿಗೆ ಬೆಳೆಯಬೇಕಿದ್ದರೆ ಅವರ ಜಾಣ್ಮೆಯೇ ಕಾರಣ. ಕೆಂಪೇಗೌಡರ ಕೊಡುಗೆಯನ್ನು ಸ್ಮರಿಸುವುದಕ್ಕಾಗಿ ಈ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.
ರಾಜ್ಯದ ಎಲ್ಲ ಜಿಲ್ಲೆಗಳಿಗೂ ತೆರಳಿ ಈ ವಾಹನ ಪವಿತ್ರ ಮೃತ್ತಿಕೆ ಸಂಗ್ರಹ ಮಾಡಲಿದೆ.