Advertisement

March18ರಂದು ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಕಹಳೆ

09:37 PM Mar 12, 2024 | Team Udayavani |

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಚುನಾವಣೆ ಪ್ರಚಾರ ನಿಮಿತ್ತ ನಗರದ ಅಲ್ಲಮಪ್ರಭು ಮೈದಾನದಲ್ಲಿ ಮಾ.18ರಂದು ಮಧ್ಯಾಹ್ನ 2 ಗಂಟೆಗೆ ಬೃಹತ್‌ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

Advertisement

ದಾವಣಗೆರೆ, ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು ಸೇರಿ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆ ಇದಾಗಲಿದೆ. ಈ ಸಭೆಗೆ ಶಿವಮೊಗ್ಗ ಕ್ಷೇತ್ರದಿಂದ ಒಂದೂವರೆ ಲಕ್ಷ ಜನ ಸೇರಲಿದ್ದಾರೆ. ಉಳಿದ ಕ್ಷೇತ್ರಗಳ ಜನರೂ ಭಾಗಿಯಾಗಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತಾರೆಂಬ ವದಂತಿ ಕುರಿತು ಪ್ರತಿಕ್ರಿಯಿಸಿದ ರಾಘವೇಂದ್ರ, ಇದೆಲ್ಲ ಸುಳ್ಳು ಸುದ್ದಿ. ಪ್ರಧಾನಿ ಮೋದಿಯವರ ಪ್ರಚಾರ ಸಭೆ ಈಶ್ವರಪ್ಪನವರ ಸಲಹೆ ಮತ್ತು ಮಾರ್ಗದರ್ಶನದಲ್ಲಿಯೇ ನಡೆಯಲಿದೆ. ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next