Advertisement
ಅನಂತರ ಖುದ್ದು ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು. ಈಗ ಇಸ್ರೋ ಕಚೇರಿಗೂ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚಂದ್ರನ ಅಂಗಳದಲ್ಲಿ ಚಂದ್ರಯಾನ-3 ನೌಕೆಯನ್ನು ಇಳಿಸುವ ಮೂಲಕ ಇಸ್ರೋ ಮತ್ತೂಮ್ಮೆ ಸಾಧನೆ ಮಾಡಿದೆ. ಇದೊಂದು ಸುವರ್ಣಾಕ್ಷರಗಳಲ್ಲಿ ಬರೆಯುವ ಕ್ಷಣವಾಗಿದೆ. ಈ ಮಿಷನ್ ಯಶಸ್ಸಿಗೆ ಭಾಗಿಯಾದ ಇಸ್ರೋ ವಿಜ್ಞಾನಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ನನ್ನ ಅಭಿನಂದನೆಗಳು. ವಿಶ್ವದಲ್ಲಿ ಕೀರ್ತಿ ಹೆಚ್ಚಿಸಿದ ಎಲ್ಲರಿಗೂ ನನ್ನ ಹೃದಯಪೂರ್ವಕ ನಮನಗಳು
– ಥಾವರ್‌ಚಂದ್ ಗೆಹ್ಲೋಟ್, ರಾಜ್ಯಪಾಲರು