ಉಡುಪಿ: 2020ರ ಸಾಲಿನ ಕೊನೆಯ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತಾನಾಡಿದ ಪ್ರಧಾನಿ ಮೋದಿ ಉಡುಪಿ ಜಿಲ್ಲೆಯ ದಂಪತಿಗಳನ್ನು ಶ್ಲಾಘಿಸಿದ್ದಾರೆ.
ಸೋಮೇಶ್ವರ ಬೀಚ್ ನಲ್ಲಿದ್ದ 800 ಕೆ.ಜಿ ಗೂ ಅಧಿಕ ಕಸವನ್ನು ತೆಗೆದು ಸ್ವಚ್ಛಗೊಳಿಸಿದ ಅನುದೀಪ್ ಹಾಗೂ ಮಿನುಶಾ ಜೋಡಿಯನ್ನು, ಪ್ರಧಾನಿ ಮೋದಿ ಅಭಿನಂದಿಸಿದ್ದು, ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೆ ಸ್ವಚ್ಚ ಭಾರತ ಅಭಿಯಾನದಲ್ಲಿ ದೇಶದ ಜನರು ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಬೈಂದೂರು ಮೂಲದ ಕಳವಾಡಿಯ ಅನುದೀಪ್ ಮತ್ತು ಮಿನುಷಾ ಕಾಂಚನ್ ನವಜೋಡಿಗಳು ತಮ್ಮ ಪರಿಸರ ಕಾಳಜಿಯಿಂದ ಕಳೆದ ನವೆಂಬರ್ 27ರಿಂದ ಸೋಮೇಶ್ವರ ಕಡಲ ತೀರವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು.
ಇದನ್ನೂ ಓದಿ:ಸ್ವಚ್ಛ ಸರ್ವೇಕ್ಷಣ : ಆನ್‌ಲೈನ್ ಅಭಿಯಾನಕ್ಕೆ ಒತ್ತು
ಈ ಕುರಿತು ಟ್ಟೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಡುಪಿ ಮೂಲದ ಅನುದೀಪ್ ಹಾಗೂ ಮಿನುಶಾ ಜೋಡಿಯನ್ನು ಅಭಿನಂದಿಸಿದ್ದು, ಇವರು ಸೋಮೇಶ್ವರ ಬೀಚ್ ನಲ್ಲಿದ್ದ 800 ಕೆ.ಜಿ ಪ್ಲಾಸ್ಟಿಕ್ ಹಾಗೂ ಮತ್ತಿತರ ಕಸವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛ ಭಾರತ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.