Advertisement
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು 72 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದರು. ಅದೇ ರೀತಿ ಇಂದಿನ ಪ್ರಧಾನಿ ನರೇಂದ್ರ ಮೋದಿ ಎಲ್ಲ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಬಿಜೆಪಿ ನಾಯಕರಾದ ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ರಾಜ್ಯದ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವೊಲಿಸಬೇಕು ಎಂದು ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರ ಬರ ಪರಿಹಾರ ನೀಡುವಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಅದನ್ನು ಲೆಕ್ಕಿಸದೇ ರೈತರ ನೆರವಿಗೆ ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ. Advertisement
ಪ್ರಧಾನಿ ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ ಮಾಡಲಿ: ಪರಮೇಶ್ವರ್
03:45 AM Jun 22, 2017 | Harsha Rao |
Advertisement
Udayavani is now on Telegram. Click here to join our channel and stay updated with the latest news.