Advertisement

ಸಾಧನೆ ಹೇಳದೆ, ಟೀಕೆಗಳ ಲೆಕ್ಕ ಕೊಟ್ಟ ಪ್ರಧಾನಿ: ಡಿಕೆಶಿ ವ್ಯಂಗ್ಯ

10:22 PM Apr 30, 2023 | Team Udayavani |

ಬೆಂಗಳೂರು: ರಾಜ್ಯದ ಜನ ಡಬಲ್‌ ಎಂಜಿನ್‌ ಸರಕಾರದ ಸಾಧನೆ ಮತ್ತು ಕೊಡುಗೆಗಳ ಲೆಕ್ಕ ಕೊಡಬಹುದು ಎಂದು ಎದುರು ನೋಡುತ್ತಿದ್ದರು. ಆದರೆ ಪ್ರಧಾನಿ ಮೋದಿ ಅವರು ಬರೀ ತಮ್ಮ ವಿರುದ್ಧದ ಟೀಕೆಗಳ ಲೆಕ್ಕ ಕೊಟ್ಟು ಹೋಗಿರುವುದು ಬೇಸರದ ಸಂಗತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಟೀಕಿಸಿದರು.
ಸದಾಶಿವ ನಗರದ ತಮ್ಮ ನಿವಾಸದಲ್ಲಿ ರವಿವಾರ ಹಮ್ಮಿಕೊಂಡಿದ್ದ ವಿವಿಧ ನಾಯಕರ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಡಬಲ್‌ ಎಂಜಿನ್‌ ಸರಕಾರ ರಾಜ್ಯಕ್ಕೆ ನೀಡಿರುವ ಕೊಡುಗೆಗಳ ಲೆಕ್ಕ ಹೇಳಬೇಕಿತ್ತು. ಆದರೆ ರಾಜ್ಯಕ್ಕೆ ಬಂದು ತಮ್ಮ ವಿರುದ್ಧದ ಟೀಕೆಗಳ ಲೆಕ್ಕ ಹೇಳುತ್ತಿದ್ದಾರೆ. ಪ್ರಜಾಪ್ರಭುತ ವ್ಯವಸ್ಥೆಯಲ್ಲಿ ವಿಪಕ್ಷಗಳು, ಆಡಳಿತ ಪಕ್ಷದ ನ್ಯೂನತೆಗಳನ್ನು ಹೇಳುವುದು, ಟೀಕಿಸುವುದು ಸಹಜ ಎಂದು ಹೇಳಿದರು.

Advertisement

ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಹಾಗೂ ಅವರ ಸಚಿವರ ಸಾಧನೆ ಬಗ್ಗೆ ಮಾತನಾಡುತ್ತಿಲ್ಲ. ದಕ್ಷ ಆಡಳಿತಕ್ಕೆ ಹೆಸರಾಗಿರುವ ಕರ್ನಾಟಕ ರಾಜ್ಯದಲ್ಲಿ ಇವರು ತಮ್ಮ ಆಡಳಿತ ಹೇಗಿತ್ತು ಎಂಬುದನ್ನು ಹೇಳುತ್ತಿಲ್ಲ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ, ಆದರೆ ರಾಜ್ಯದಲ್ಲಿ ನಾಯಕತ್ವವನ್ನು ಬಿಂಬಿಸಬೇಕಲ್ಲವೇ? ಬಿಜೆಪಿ ಇಂತಹ ದುಃಸ್ಥಿತಿಗೆ ಬಂದಿದೆ ಎಂಬುದಕ್ಕೆ ಸಾಕ್ಷಿ ಎಂದು ಟೀಕಿಸಿದ ಅವರು, ಮೋದಿ ಕೋವಿಡ್‌ ಸಂದರ್ಭದಲ್ಲಿ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ ಘೋಷಿಸಿದ್ದು, ಯಾವ ವರ್ಗದವರಿಗೆ ಎಷ್ಟು ಪರಿಹಾರ ನೀಡಲಾಗಿದೆ? ಕೋವಿಡ್‌ನಿಂದ ಮೃತಪಟ್ಟವರಿಗೆ, ಆಕ್ಸಿಜನ್‌ ದುರಂತದಲ್ಲಿ ಸಾವನ್ನಪ್ಪಿದವರಿಗೆ ಎಷ್ಟು ಪರಿಹಾರ ನೀಡಿ¨ªಾರೆ ಎಂಬ ಲೆಕ್ಕವನ್ನು ನೀಡಲೇ ಇಲ್ಲ ಎಂದರು.

ನಿಮ್ಮ ಮನೆ ಸರಿಪಡಿಸಿಕೊಳ್ಳಿ
ಕಾಂಗ್ರೆಸ್‌ ಡಾ| ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಿದೆ ಎಂಬ ಪ್ರಧಾನಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಡಾ| ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‌ ಸಂವಿಧಾನ ಕರಡು ಸಮಿತಿಗೆ ನೇಮಿಸಿತ್ತು. ಆದರೆ ಬಿಜೆಪಿ ನಾಯಕರು ಅವರ ಪಕ್ಷವನ್ನು ಕಟ್ಟಿ ಬೆಳೆಸಿದ ಆಡ್ವಾಣಿ, ಮುರಳಿ ಮನೋಹರ್‌ ಜೋಷಿ, ಯಡಿಯೂರಪ್ಪ ಅವರಿಗೆ ಮಾಡಿರುವ ಅವಮಾನದ ಬಗ್ಗೆ ಯೋಚಿಸಲಿ. ನಿಮ್ಮ ಮನೆಯನ್ನು ನೀವು ಸರಿಪಡಿಸಿಕೊಳ್ಳಿ ಎಂದು ತಿರುಗೇಟು ನೀಡಿದರು.
ಪರಮೇಶ್ವರ್‌ ಮೇಲಿನ ದಾಳಿ ನಾಟಕ ಎಂದಿರುವ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನಾಗಲಿ ಪರಮೇಶ್ವರ ಅವರಾಗಲಿ ನಿರ್ದೇಶಕರಲ್ಲ; ನಿರ್ಮಾಪಕರೂ ಅಲ್ಲ. ಕುಮಾರಣ್ಣ ದೊಡ್ಡ ನಿರ್ಮಾಪಕರು. ಅವರು ಏನಾದರೂ ಹೇಳಿಕೊಳ್ಳಲಿ ಎಂದರು.

ಎರಡು ದಿನದಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ
ಮುಂದಿನ ಎರಡು ದಿನಗಳಲ್ಲಿ ಕಾಂಗ್ರೆಸ್‌ ಚುನಾವಣ ಪ್ರಣಾಳಿಕೆ ಬಿಡುಗಡೆ ಮಾಡಲಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.
ಪ್ರಣಾಳಿಕೆಯಲ್ಲಿ ಎಲ್ಲ ವರ್ಗಗಳಿಗೆ ಆದ್ಯತೆ ನೀಡಲಾಗುವುದು. ಹಳೆಯ ಪಿಂಚಣಿ ಬಗ್ಗೆ ಆಲೋಚಿಸಿದ್ದು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ, ಮಲೆನಾಡು ಪ್ರದೇಶ, ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ನೀಡಲಾಗುವುದು ಎಂದು ಅವರು ಹೇಳಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next