Advertisement

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿಗಳಿಂದ ಉದ್ಘಾಟನೆ

09:20 PM Oct 06, 2022 | Team Udayavani |

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.

Advertisement

ಸಿಎಂ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ 6 ನೇ ಸಭೆಯಲ್ಲಿ ಮಾತನಾಡಿದ ಸಿಎಂ, ನಾಡಿನ ವಿವಿಧ ಸ್ಥಳಗಳಿಂದ ಪವಿತ್ರ ಮೃತ್ತಿಕೆ ಹಾಗೂ ಜಲಸಂಗ್ರಹಿಸುವ ಅಭಿಯಾನದಲ್ಲಿ ತಾಲೂಕು ಕೇಂದ್ರಗಳಿಗೆ ಮಣ್ಣನ್ನು ತಲುಪಿಸುವಂತೆ ಸೂಚನೆ ನೀಡಿ, ಅಲ್ಲಿಂದ ಜಿಲ್ಲಾ ಕೇಂದ್ರಕ್ಕೆ ತರಿಸುವಂತೆ ಸೂಚಿಸಿದರು. ಕೆಂಪೇಗೌಡರ ಜೀವನಚರಿತ್ರೆಯನ್ನು ಬಿಂಬಿಸುವ ವಿಡಿಯೋ ಮ್ಯಾಪಿಂಗ್ ಹಾಗೂ ನೃತ್ಯ ರೂಪಕ ಆಯೋಜಿಸಲು ಅನುಮತಿ ನೀಡಿದ್ದರು.

ಕೆಂಪೇಗೌಡರ ವೀರ ಸಮಾಧಿ ಅಭಿವೃದ್ಧಿಗೆ ಭೂಸ್ವಾಧೀನ ಪ್ರಕ್ರಿಯೆ, 46 ತಾಣಗಳಲ್ಲಿ ನಾಮಫಲಕಗಳ ಅಳವಡಿಕೆ, ಮಾಗಡಿ ಕೋಟೆ ಸಂರಕ್ಷಣೆ ಮುಂತಾದ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಆರ್.ಅಶೋಕ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತಿತರರು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next