Advertisement

ವಿದೇಶ ಸುತ್ತಿರುವುದೇ ಪ್ರಧಾನಿ ಸಾಧನೆ

12:09 PM Jul 26, 2018 | Team Udayavani |

ಬೆಂಗಳೂರು: ವಿದೇಶ ಸುತ್ತುವುದು ಮತ್ತು “ಮನ್‌ ಕಿ ಬಾತ್‌’ನಲ್ಲಿ ಮಾತನಾಡುವುದೇ ಪ್ರಧಾನಿ ಸಾಧನೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

Advertisement

ನಗರದ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್‌ ಭವನದಲ್ಲಿ ಬುಧವಾರ ಪಕ್ಷದ ಒಬಿಸಿ ಘಟಕದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬಿಜೆಪಿಯವರು ಭಾವನಾತ್ಮಕ ವಿಷಯಗಳ ಮೇಲೆ ಜನರನ್ನು ಕೆರಳಿಸುತ್ತಿದ್ದಾರೆ.

ದಲಿತರ ಮೇಲೆ ಹಲ್ಲೆ ನಡೆಯುವುದನ್ನು ಬಿಜೆಪಿಯ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಪ್ರತಿಪಕ್ಷಗಳ ನಾಯಕರ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ನಡೆಸುತ್ತಿರುವ ದ್ವೇಷದ ರಾಜಕಾರಣವನ್ನು ದೇಶದ ಇತಿಹಾಸದಲ್ಲಿ ಈ ಹಿಂದೆ ಯಾರೂ ಮಾಡಿರಲಿಲ್ಲ ಎಂದರು.

ದೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹಾಗೂ ಪ್ರಧಾನಿ ಮೋದಿಯವರನ್ನು ಎದುರಿಸುವ ಶಕ್ತಿ ರಾಹುಲ್‌ ಗಾಂಧಿಯವರಿಗೆ ಮಾತ್ರ ಇದೆ. ಆದರೂ ಬಿಜೆಪಿಯವರು ಅವರನ್ನು ಗೇಲಿ ಮಾಡುತ್ತಾರೆ.

ದೇಶದ ಹಿತದೃಷ್ಟಿಯಿಂದ ರಾಜ್ಯದಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದ್ದು, ರಾಜ್ಯದಲ್ಲಿನ ಕಾಂಗ್ರೆಸ್‌ ಮೈತ್ರಿಗೆ ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ದೊರೆತಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗದಿದ್ದರೆ ಇನ್ನೂ ಕಷ್ಟವಾಗುತ್ತಿತ್ತು ಎಂದು ಹೇಳಿದರು.

Advertisement

ಕರ್ನಾಟಕ ಅನೇಕ ವಿಷಯಗಳಲ್ಲಿ ದೇಶದ ನಂಬರ್‌ ಒನ್‌ ರಾಜ್ಯವಾಗಿದೆ. ಹಿಂದಿನ ಕಾಂಗ್ರೆಸ್‌ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ನೀಡಿದರೂ ಜನರು ನಮ್ಮ ಅಭಿವೃದ್ಧಿ ಕಾಮಗಾರಿಗಳಿಗೆ ಮಾನ್ಯತೆ ನೀಡಲಿಲ್ಲ. ಜನರ ತೀರ್ಪು ಒಪ್ಪಿಕೊಂಡು ಮುಂದಿನ ಚುನಾವಣೆಯಲ್ಲಿ ತಪ್ಪಾಗದಂತೆ ಕಾರ್ಯ ನಿರ್ವಹಿಸಬೇಕು ಎಂದರು.

ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಅವರು ಆಷಾಢದ ನಂತರ ಮೈತ್ರಿ ಸರ್ಕಾರ ಪತನವಾಗಲಿದೆ ಎಂಬುದಾಗಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ದಿನೇಶ್‌ ಗುಂಡೂರಾವ್‌, ಸಮ್ಮಿಶ್ರ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಸರ್ಕಾರ ಪತನ ಮಾಡುವ ಉದ್ದೇಶ ಬಿಜೆಪಿಯವರಿಗೆ ಇರಬಹುದು. ಅದಕ್ಕೆ ಅವರು ಈ ರೀತಿ ಹೇಳಿರಬಹುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next