Advertisement

ಹಳೇ ಮೈಸೂರು ಭಾಗದ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿ ಸಂವಾದ

06:38 PM Jun 20, 2022 | Team Udayavani |

ಮೈಸೂರು: ಹಳೇ ಮೈಸೂರು ಭಾಗದ ಆಯ್ದ 20 ಕೇಂದ್ರ ಸರ್ಕಾರದ 43 ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಕೇಂದ್ರದ ಯೋಜನೆಗಳಿಂದ ತಮಗಾಗಿರುವ ಲಾಭ, ಸ್ವ ಉದ್ಯೋಗ ಆರಂಭಿಸಲು ಕಾರಣವಾದ ಸರ್ಕಾರದ ಕ್ರಮಗಳನ್ನು ಫಲಾನುಭವಿಗಳು ಶ್ಲಾಘಿಸಿದರು.

Advertisement

ಇದೇ ವೇಳೆ ನಾಗನಹಳ್ಳಿ-ಮೈಸೂರಿನಲ್ಲಿ ನೂತನ ರೈಲ್ವೆ ಕೋಚಿಂಗ್ ಸಂಕೀರ್ಣ ನಿರ್ಮಾಣಕ್ಕೆ ಶಂಕುಸ್ಥಾಪನೆ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ 155.49 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಉತ್ಕೃಷ್ಟತಾ ಕೇಂದ್ರವನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ಡಾ.ಕೆ.ಸುಧಾಕರ್, ಗೋಪಾಲಯ್ಯ, ಸಂಸದರಾದ ವಿ.ಶ್ರೀನಿವಾಸಪ್ರಸಾದ್, ಸುಮಲತಾ ಅಂಬರೀಶ್, ಪ್ರತಾಪಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಜಿ.ಟಿ.ದೇವೇಗೌಡ, ಹರ್ಷವರ್ಧನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನೂ ಓದಿ :ಪ್ರಧಾನಿ ಭೇಟಿಯಿಂದ ಕಾರ್ಯಕರ್ತರಲ್ಲಿ ಹೆಚ್ಚಿದ ಉತ್ಸಾಹ : ನಳಿನ್‍ಕುಮಾರ್ ಕಟೀಲ್ 

ಮೈಸೂರು ವಿಶ್ವವಿದ್ಯಾಲಯದ ಅಥ್ಲೆಟಿಕ್ಸ್ ಕ್ರೀಡಾಂಗದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸಿದ ಮೋದಿ ಅವರನ್ನು ಸಚಿವರಾದ ಗೋಪಾಲಯ್ಯ, ಡಾ.ಕೆ.ಸುಧಾಕರ್, ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ, ಮೇಯರ್ ಸುನಂದಾ ಪಾಲನೇತ್ರ ಸ್ವಾಗತಿಸಿದರು. ಮೋದಿ ಅವರ ಜತೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಆಗಮಿಸಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next