Advertisement

ರೂಪಾಯಿ ಮೌಲ್ಯ ಚೇತರಿಕೆ ಅವಶ್ಯ; ತೈಲ ಕಂಪನಿಗಳ CEO ಜತೆ ಮೋದಿ

06:30 PM Oct 15, 2018 | Sharanya Alva |

ನವದೆಹಲಿ: ಸತತವಾಗಿ ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮದಿಂದ ಜಾಗತಿಕವಾಗಿ ಆರ್ಥಿಕ ಅಭಿವೃದ್ಧಿಗೆ ಅಡ್ಡಿ ಉಂಟಾಗಿದೆ. ಈ ನಿಟ್ಟಿನಲ್ಲಿ ಜಾಗತಿಕ ಇಂಧನ ಸರಬರಾಜುದಾರರು  ತೈಲ ಖರೀದಿ ಪಾವತಿಯ ಷರತ್ತುಗಳನ್ನು ಪುನರ್ ಪರಿಶೀಲಿಸುವ ಮೂಲಕ ಕುಸಿಯುತ್ತಿರುವ ರೂಪಾಯಿ ಮೌಲ್ಯ ಚೇತರಿಕೆ ಕಾಣುವಂತೆ ಅನುಕೂಲ ಮಾಡಿಕೊಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ತೈಲ ಕಂಪನಿಗಳ ಸಿಇಒಗಳ ಜತೆ ನಡೆಸಿದ ಮಾತುಕತೆ ವೇಳೆ ಮನವಿ ಮಾಡಿಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ಪಾವತಿ ಷರತ್ತನ್ನು ಪುನರ್ ಪರಿಶೀಲಿಸುವ ಮೂಲಕ ಸ್ಥಳೀಯ(ಭಾರತ) ಕರೆನ್ಸಿಗಳಿಗೆ ತಾತ್ಕಾಲಿಕ ಚೇತರಿಕೆ ಕಾಣಲು ಅವಕಾಶ ಮಾಡಿಕೊಡಬೇಕು ಎಂದು ಮೋದಿ ಮನವಿ ಮಾಡಿಕೊಂಡಿರುವುದಾಗಿ ವರದಿ ಹೇಳಿದೆ.

ಶೇ.80ರಷ್ಟು ತೈಲವನ್ನು ಭಾರತ ಆಮದು ಮಾಡಿಕೊಳ್ಳುತ್ತಿದ್ದು, ಕಚ್ಚಾ ತೈಲ ಬೆಲೆ ಏರಿಕೆಯಿಂದಾಗಿ ಬೆಲೆ ಗಗನಕ್ಕೇರುತ್ತಿದೆ. ಅಲ್ಲದೇ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದು ದೇಶದ ಅಭಿವೃದ್ಧಿಗೆ ತೊಡಕಾಗಿರುವುದಾಗಿ ವರದಿ ತಿಳಿಸಿದೆ.

ದಿನದಿಂದ ಗಗನಕ್ಕೇರುತ್ತಿರುವ ತೈಲ ಬೆಲೆ ಹಾಗೂ ಬದಲಾಗುತ್ತಿರುವ ಸನ್ನಿವೇಶಕ್ಕೆ ತಕ್ಕಂತೆ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಜಾಗತಿಕ ಹಾಗೂ ಭಾರತೀಯ ತೈಲ ಕಂಪನಿಗಳ ಸಿಇಒ ಜೊತೆ ಪ್ರಧಾನಿ ಮೋದಿ ಮಾತುಕತೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next